ಓದಿನಷ್ಟೇ ಕ್ರೀಡೆಗೂ ಪ್ರಾಮುಖ್ಯತೆ ನೀಡಿ

10 KRN-1
ಕೆ.ಆರ್.ನಗರದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ ನೀಡಿದರು. ಆರ್.ಕೃಷ್ಣಪ್ಪ, ಸ್ವಾಮಿಗೌಡ, ಎಂ.ಬಿ.ಕುಮಾರಸ್ವಾಮಿ, ಲಕ್ಷ್ಮೀಕಾಂತ್, ಡಿ.ಕೆ.ಜಗದೀಶ್, ಬಿ.ಟಿ.ಗೋವಿಂದರಾಜು, ಎಚ್.ಎಸ್.ಸ್ವಾಮಿ ಇತರರು ಇದ್ದರು.
Published on

ಕೆ.ಆರ್.ನಗರ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಕ್ರೀಡಾಪಟುಗಳಾದರೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲೂ ಉದ್ಯೋಗ ಪಡೆಯಲು ಹೆಚ್ಚು ಅವಕಾಶಗಳಿವೆ. ಆದ್ದರಿಂದ ಒಂದಲ್ಲ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯಿತಿ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದಯಾನಂದ ಪ್ರೌಢಶಾಲೆಯ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನಷ್ಟೇ ಕ್ರೀಡೆಗೂ ಪ್ರಾಮುಖ್ಯತೆ ನೀಡಿದಾಗ ಎಲ್ಲ ವಿಭಾಗದಲ್ಲೂ ಯಶಸ್ಸು ಕಾಣಲು ಸಾಧ್ಯ ಎಂದರು.

ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯವಂತರಾಗಿ ರುವುದರ ಜತೆಗೆ ಸದೃಢ ಶರೀರ ಹೊಂದಲು ಸಾಧ್ಯವಾಗಲಿದೆ. ಅದಕ್ಕಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಸಲಹೆ ನೀಡಿದ ಶಾಸಕರು, ಎಲ್ಲ ಶಾಲೆಗಳಲ್ಲೂ ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳಿಗೂ ಸೂಚನೆ ನೀಡಬೇಕೆಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕ್ರೀಡಾಂಗಣದಲ್ಲಿ ಯುವಜನ ಸಬಲೀಕರಣ ಇಲಾಖೆಯ ಷಟಲ್ ಬ್ಯಾಡ್ಮಿಂಟನ್ ಕೋರ್ಟ್‌ನ ನಿರ್ಮಾಣ ಮಾಡುತ್ತಿದ್ದು, ಯುವಜನತೆಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾ ಕ್ಷೇತ್ರಕ್ಕೆ ವಿಶೇಷ ಅನುದಾನ ತರಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸ್ವಾಮಿಗೌಡ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಬಿ.ಕುಮಾರಸ್ವಾಮಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ.ಜಗದೀಶ್, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ಗೋವಿಂದರಾಜು, ಭೇರ್ಯ ದಯಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್.ಎಸ್.ಸ್ವಾಮಿ, ಮುಖ್ಯಶಿಕ್ಷಕ ಸಿ.ಸುರೇಶ್, ದೈಹಿಕ ಶಿಕ್ಷಕ ಕೃಷ್ಣೇಗೌಡ, ಸಹಶಿಕ್ಷಕ ದೊಡ್ಡಮೊಗೇಗೌಡ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net