ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

IMG_20240919_165745
Published on

ಹನಗೋಡು: ಹನಗೋಡು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ, ಔಟ್ ರಿಚ್ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ‘ಸ್ವಚ್ಛತೆಯ ಕಡೆಗೆ ದಿಟ್ಟ ಹೆಜ್ಜೆ’ ಅಭಿಯಾನ, ಮಾನವ ಸರಪಳಿ ರಚನೆ ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.


ಗ್ರಾಪಂ ಅಧ್ಯಕ್ಷ ಚೆನ್ನಯ್ಯ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸೆ.14 ರಿಂದ ಅಕ್ಟೋಬರ್ 2ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕನರು, ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶ ಎಂದರು.


ಪ್ರೌಢಶಾಲೆಯ ಉಪ ಪ್ರಾಂಶುಪಾಲ ಸಂತೋಷ್ ಕುಮಾರ್ ಮಾತನಾಡಿ, ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಘೋಷವಾಕ್ಯದೊಂದಿಗೆ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸುತ್ತಲಿನ ಪರಿಸರದ ಸ್ವಚ್ಛತೆಗೆ ಕಾಳಜಿ ವಹಿಸಬೇಕು. ಪರಿಸರ ಸ್ವಚ್ಛವಾಗಿದ್ದರೆ, ಆರೋಗ್ಯವಂತರಾಗಿರಲು ಸಾಧ್ಯ. ಆದ್ದರಿಂದ ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತೆ ನಿರ್ವಹಣೆ ಮಾಡಬೇಕು ಎಂದು ಹೇಳಿದರು.


ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿ ಪಂಚಾಯಿತಿ ಕಚೇರಿ ಆವರಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ತ್ಯಾಜ್ಯದಿಂದ ಕಲೆ ಮತ್ತು ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಗ್ರಾಪಂ ಸದಸ್ಯರಾದ ಶಿವಣ್ಣ, ಸಂತೋಷ್, ಕೆ.ಇ. ಈಶ್ವರ್, ರತ್ನಾ ಶ್ರೀಧರ್, ಛಾಯಾ ನಾಗೇಗೌಡ, ಬೋರೇಗೌಡ, ಮಹದೇವನಾಯಕ, ಪಿಡಿಒ ಅನಿತಾ, ಔಟ್ ರಿಚ್ ಸಂಸ್ಥೆಯ ಜಗದೀಶ್, ಕೆಂಡೇಶ್, ಮನೋಜ್, ಆನಂದ್, ಶಿಕ್ಷಕರಾದ ವೀರಣ್ಣ ಕರಡಿ, ಭಾನುಮತಿ, ಜಯಂತಿ, ಪ್ರಸನ್ನ, ರಘುಪತಿ, ಸೌಮ್ಯಾ, ಜಯಲಕ್ಷ್ಮೀ, ಅರ್ಚನಾ, ನಿಹಾರಿಕಾ, ಗ್ರಾಪಂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net