ಕ್ಷೇತ್ರಕ್ಕೆ ತಂದ ಅನುದಾನ ಮಾಹಿತಿ ನೀಡಿ

10Koppa02
ಕ್ಷೇತ್ರಕ್ಕೆ ತಂದಿರುವ ಅನುದಾನದ ಮಾಹಿತಿ ನೀಡುವಂತೆ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ದಿನೇಶ್ ಹೊಸೂರು, ಪುಣ್ಯಪಾಲ್ ಜೆ, ಶೃತಿ ರೋಹಿತ್ ಇದ್ದರು.
Published on

ಕೊಪ್ಪ: ಕಳೆದ 10 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಿಂದ ಕ್ಷೇತ್ರಕ್ಕೆ ಎಷ್ಟು ಅನುದಾನ ತರಲಾಗಿದೆ. ಎಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಶಾಸಕರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕಾರ್ಯದರ್ಶಿ ಪುಣ್ಯಪಾಲ್ ಜೆ ಮಾತನಾಡಿ, ಚುನಾವಣೆಯ ಸಮಯದಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಎಷ್ಟು ಈಡೇರಿಸಲಾಗಿದೆ, ಕ್ಷೇತ್ರಕ್ಕೆ ತಂದಿರುವ ಅನುದಾನಗಳ ಬಗ್ಗೆ ಮಾಧ್ಯಮದ ಮೂಲಕ ಜನರಿಗೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ನಮ್ಮ ಬಳಿ ಇರುವ ಅಂಕಿ ಅಂಶವನ್ನು ಬಿಡುಗಡೆ ಮಾಡಲಾಗುವುದು ಎಂದರು.
ನಿಯೋಜಿತ ಮಂಡಲ ಅಧ್ಯಕ್ಷ ದಿನೇಶ್ ಹೊಸೂರು, ಎಚ್.ಆರ್ ಜಗದೀಶ್, ಅರುಣ್ ಶಿವಪುರ, ಶೃತಿ ರೋಹಿತ್, ಪಪಂ ಸದಸ್ಯ ಇದಿನಬ್ಬ, ರೇಖಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net