ಜಿಪಿಟಿ ಶಿಕ್ಷಕರಿಗೆ ನ್ಯಾಯ ಕಲ್ಪಿಸಿ

Give justice to GPT teachers
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಇತ್ತೀಚೆಗೆ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಅವರನ್ನು ಭೇಟಿಯಾಗಿ ಕೌನ್ಸಿಲಿಂಗ್‌ನಲ್ಲಿ ತಮಗೆ ವರ್ಗಾವಣೆಗೆ ಅವಕಾಶ ಮಾಡಿಕೊಡದೆ ತಾರತಮ್ಯ ಎಸಗುತ್ತಿದ್ದು, ಈ ಬಗ್ಗೆ ಧ್ವನಿ ಎತ್ತುವಂತೆ ಮನವಿ ಮಾಡಿದರು.
Published on

ವಿಜಯಪುರ : 6ನೇ ತರಗತಿಯಿಂದ 8ನೇ ತರಗತಿವರೆಗೆ ಪಾಠ ಮಾಡುತ್ತಿರುವ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಕೌನ್ಸಿಲಿಂಗ್‌ನಲ್ಲಿ ವರ್ಗಾವಣೆಗೆ ಅವಕಾಶ ಮಾಡಿಕೊಡದೆ ತಾರತಮ್ಯ ಎಸಗುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಬೇಸರ ವ್ಯಕ್ತಪಡಿಸಿದರು.

ತಮ್ಮನ್ನು ಇತ್ತೀಚೆಗೆ ಭೇಟಿಯಾದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ತಮಗೆ ವರ್ಗಾವಣೆಯಲ್ಲಿ ಆಗುತ್ತಿರುವ ತಾರತಮ್ಯ ಸರಿಪಡಿಸುವಂತೆ ಮನವಿ ಮಾಡಿದ ಶಿಕ್ಷಕರೊಂದಿಗೆ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರೊಂದಿಗೆ ಚರ್ಚಿಸಿ ತಮಗಾಗಿರುವ ತಾರತಮ್ಯ ಮತ್ತು ಅನ್ಯಾಯವನ್ನು ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೆರಿ ಅವರೊಂದಿಗೆ ದೂರವಾಣಿಯೊಂದಿಗೆ ಸಂಪರ್ಕಿಸಿ, ಜಿಪಿಟಿ ಶಿಕ್ಷಕರ ಸಮಸ್ಯೆಯ ನಿವಾರಣೆಗೆ ಆಗ್ರಹಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net