ಭದ್ರಾವತಿಗೆ ಮೆಡಿಕಲ್ ಕಾಲೇಜು ಕೊಡಿ: ಬಿ.ಕೆ.ಸಂಗಮೇಶ್ವರ್

mla b.k.sangameshwar
ಶಾಸಕ ಬಿ.ಕೆ.ಸಂಗಮೇಶ್ವರ್
Published on

ಶಿವಮೊಗ್ಗ: ಭದ್ರಾವತಿಗೂ ಮೆಡಿಕಲ್ ಕಾಲೇಜು ನೀಡುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್ ವೈದ್ಯಕೀಯ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಗುದ್ದಲಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ನೀಡಲಾಗುತ್ತಿದೆ. ಭದ್ರಾವತಿಗೊಂದು ವೈದ್ಯಕೀಯ ಕಾಲೇಜಿನ ಅವಶ್ಯಕತೆ ಇದೆ. ಕಾನೂನಿನಲ್ಲಿ ಅವಕಾಶವಿದ್ದರೆ ಅನುಮತಿ ಕೊಡಿ ಎಂದು ವೇದಿಕೆಯಲ್ಲೇ ಮನವಿ ಮಾಡಿದರು.
ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಆರಂಭಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ. ಕಿದ್ವಾಯಿಯಲ್ಲಿರುವ ಎಲ್ಲ ಚಿಕಿತ್ಸೆಗಳು ಇಲ್ಲಿಯೂ ಸಿಗುವಂತೆ ಆಗಬೇಕು. ಅರ್ಧಂಬರ್ಧ ಸೌಲಭ್ಯಗಳು ಸಿಗುವಂತೆ ಆಗಬಾರದು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಕಾಂಗ್ರೆಸ್ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net