ಮಾಂಸದ ಅಂಗಡಿಗಳಿಗೆ ನೋಟಿಸ್ ನೀಡಿ

18ark5
Published on

ಅರಕಲಗೂಡು: ಗಬ್ಬೆದ್ದಿರುವ ಸಂತೆ ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡದ ಕೋಳಿ ಮತ್ತು ಮಾಂಸದ ಅಂಗಡಿಗಳಿಗೆ ನೋಟಿಸ್ ಜಾರಿಗೊಳಿಸಿ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅವರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿದರು.

ಮಾಂಸದ ಅಂಗಡಿಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಸ್ವಚ್ಛತೆ ಕೊರತೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿಬಂಧನೆಗಳನ್ನು ಪಾಲನೆ ಮಾಡದಿದ್ದರೆ ನೋಟಿಸ್ ನೀಡಿ ಅನುಮತಿ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಹಾಳಾಗಿರುವ ಚರಂಡಿಗಳನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪಪಂ ಸದಸ್ಯರಾದ ರಮೇಶ್ ವಾಟಾಳ್, ನಿತಿನ್, ಮುಖ್ಯಾಧಿಕಾರಿ ಸುರೇಶ್ ಬಾಬು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net