ಪೌಷ್ಟಿಕ ಆಹಾರ ನೀಡಿ

TKE poshan
ಅಜ್ಜಂಪುರ ತಾಲೂಕು ಶಿವನಿ ಗ್ರಾಪಂನಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಸವಿತಾ, ಮಹಾಂತೇಶ್ ಭಜಂತ್ರಿ, ಎನ್.ಚರಣ್‌ರಾಜ್ ಇತರರಿದ್ದರು.
Published on

ತರೀಕೆರೆ: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಿ ರಕ್ತಹೀನತೆ ಕಡಿಮೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.

ಅಜ್ಜಂಪುರ ತಾಲೂಕು ಶಿವನಿ ಗ್ರಾಪಂನಲ್ಲಿ ಬುಧವಾರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಗ್ರಾಪಂ ಸಹಯೋಗದಲ್ಲಿ ಏರ್ಪಡಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಆರೋಗ್ಯ ವೃದ್ಧಿಯಾಗಿ ರಕ್ತಹೀನತೆ ನಿವಾರಣೆಯಾಗಲು ಸ್ಥಳೀಯವಾಗಿ ಲಭ್ಯವಾಗುವ ಪೌಷ್ಟಿಕ ಆಹಾರ ನೀಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಲೋಕೇಶ್ವರಪ್ಪ ಮಾತನಾಡಿ, ಪ್ರತಿಯೊಬ್ಬರೂ ತಾಯಂದಿರ ಹೆಸರಿನಲ್ಲಿ ಒಂದೊಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಹೇಳಿದರು. ಗ್ರಾಪಂ ಅಧ್ಯಕ್ಷೆ ಸವಿತಾ, ಸಿಡಿಪಿಒ ಎನ್.ಚರಣ್‌ರಾಜ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯಶಿಕ್ಷಕ ದೇವೇಂದ್ರಪ್ಪ, ಮೇಲ್ವಿಚಾರಕಿ ಜಿ.ಭಾಗ್ಯಾ, ಸಿಎಚ್‌ಒ ರಂಜಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net