ಶ್ರೀ ಸಿದ್ಧಾರೂಢರ ಮೂರ್ತಿ ಸ್ಥಾಪನೆಗೆ ಸ್ಥಳ ನೀಡಲಿ

siddharodha trust
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದ ದ್ವಾರ ಬಾಗಿಲ ಬಳಿ ಶ್ರೀ ಸಿದ್ಧಾರೂಢರ ಮೂರ್ತಿ ಸ್ಥಾಪನೆಗೆ ಸ್ಥಳಾವಕಾಶ ನೀಡಬೇಕೆಂದು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿ ಆಗ್ರಹಿಸಿದೆ.

ಗುರುವಾರ ಮಠಕ್ಕೆ ಭೇಟಿ ನೀಡಿದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಈ ಕುರಿತು ಕಮಿಟಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ರೈಲ್ವೆ ನಿಲ್ದಾಣದ ಮುಖ್ಯ ದ್ವಾರದಲ್ಲಿ ಸ್ಥಾಪಿಸಲ್ಪಟ್ಟ ಸ್ವಾಮಿ ವಿವೇಕಾನಂದರ ಮೂರ್ತಿಯ ಪಕ್ಕ ಶ್ರೀ ಸಿದ್ಧಾರೂಢರ ಮೂರ್ತಿ ಸ್ಥಾಪನೆಗೆ ಸ್ಥಳಾವಕಾಶ ಮಾಡಲು ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಮೂರ್ತಿ ಸ್ಥಾಪನೆಗೆ ತಗುಲುವ ವೆಚ್ಚವನ್ನು ಶ್ರೀ ಮಠದಿಂದ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಮಿಟಿ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟರ, ಉಪಾಧ್ಯಕ್ಷ ಮಂಜುನಾಥ ಮುನವಳ್ಳಿ, ಧರ್ಮದರ್ಶಿಗಳಾದ ಬಾಳು ಮಗಜಿಕೊಂಡಿ, ಉದಯಕುಮಾರ ನಾಯ್ಕ, ಡಾ. ಗೋವಿಂದ ಮಣ್ಣೂರ, ವಿನಾಯಕ ಘೊಡ್ಕೆ, ಚನ್ನವೀರ ಮುಂಗುರವಾಡಿ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಅಧ್ಯಕ್ಷ ಮಹೇಂದ್ರ ಸಿಂಘಿ, ಭಕ್ತರಾದ ಶಂಕರಣ್ಣ ಮುನವಳ್ಳಿ, ಡಾ. ವಿ.ಎಸ್.ವಿ. ಪ್ರಸಾದ, ಮಂಜುನಾಥ ಕಾಟಕರ, ಶ್ರೀ ಮಠದ ಮ್ಯಾನೇಜರ ಈರಣ್ಣ ತುಪ್ಪದ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net