ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸಿ

Give polio drops to children without fail
ಬಾದಾಮಿ ತಾಲೂಕು ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಗುವಿಗೆ ಸಂಸದ ಪಿ.ಸಿ. ಗದ್ದಿಗೌಡರ ಪೋಲಿಯೋ ಹನಿ ಹಾಕಿದರು. ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ದಯಾನಂದ ಕರಿಯನ್ನವರ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ ಇತರರಿದ್ದರು.
Published on

ಬಾದಾಮಿ: ಪಾಲಕರು ತಮ್ಮ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಪೋಲಿಯೋ ಹನಿ ಹಾಕಿಸಿ ರೋಗದಿಂದ ರಕ್ಷಣೆ ಮಾಡಬೇಕೆಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ನಗರದ ತಾಲೂಕು ಆಸ್ಪತ್ರೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಅಂಗವಾಗಿ ಮಗುವಿಗೆ ಪೋಲಿಯೋ ಹನಿ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಹಾಕಿಸಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಮಾತನಾಡಿ, ಪಾಲಕರು ಮಗುವಿಗೆ ಪೋಲಿಯೋ ಹನಿ ಹಾಕಿಸಿ ಅಂಗವಿಕಲತೆ ತಡೆಗಟ್ಟಬಹುದು ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ದಯಾನಂದ ಕರಿಯನ್ನವರ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಎಚ್. ರೇವಣಸಿದ್ದಪ್ಪ, ತಾಲೂಕು ಆಸ್ಪತ್ರೆಯ ಪಿ.ಎಚ್. ಮಹಾಲಿಂಗಪುರ, ಆರ್.ಬಿ. ಹೋತಗಿಗೌಡರ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net