ಬಡ ಕೂಲಿಕಾರರಿಗೆ ಹಕ್ಕುಪತ್ರ ನೀಡಿ

25 gvt 02
ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ಗಂಗಾವತಿ ತಾಲೂಕಾಡಳಿತ ಸೌಧದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ ಡಗ್ಗಿ, ಪದಾಧಿಕಾರಿಗಳಾದ ಎಂ.ಬಸವರಾಜ, ಕೆ.ಹುಸೇನಪ್ಪ, ಶಿವಣ್ಣ ಬೆಣಕಲ್, ಶ್ರೀನಿವಾಸ ಹೊಸಳ್ಳಿ, ಮರಿನಾಗಪ್ಪ ಡಗ್ಗಿ, ಕೃಷ್ಣನಾಯಕ, ಶಿವಕುಮಾರ ಈಚನಾಳ್ ಇತರರಿದ್ದರು.
Published on

ಗಂಗಾವತಿ: ಕಾರಟಗಿ ತಾಲೂಕಿನ ಸಿಂಗನಾಳ ಮತ್ತು ಹುಳ್ಕಿಹಾಳ ಗ್ರಾಮದ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕಾಡಳಿತ ಸೌಧದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಯು.ನಾಗರಾಜ್‌ಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ ಡಗ್ಗಿ ಮಾತನಾಡಿ, ಕಾರಟಗಿ ತಾಲೂಕಿನ ಸಿದ್ದಾಪುರ ಹೋಬಳಿಯ ಸಿಂಗನಾಳ ಮತ್ತು ಹುಳ್ಕಿಹಾಳ ಗ್ರಾಮದಲ್ಲಿ ಕಳೆದ 30ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಡ ಕೂಲಿಕಾರರಿಗೆ ಸರ್ಕಾರ ಹಕ್ಕುಪತ್ರ ನೀಡುತ್ತಿಲ್ಲ.

ದೇವದಾಸಿ ಮಹಿಳೆಯರಿಗೂ ಹಕ್ಕುಪತ್ರ ವಿತರಿಸುವಲ್ಲಿ ಅನ್ಯಾಯವಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹಕ್ಕುಪತ್ರಕ್ಕಾಗಿ ಕಾರಟಗಿಯಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘ ಪ್ರತಿಭಟಿಸುತ್ತಿದ್ದರೂ ನ್ಯಾಯ ದೊರೆಯುತ್ತಿಲ್ಲ.

ನ್ಯಾಯಯುತ ಬೇಡಿಕೆ ಈಡೇರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಿಲವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪದಾಧಿಕಾರಿಗಳಾದ ಎಂ.ಬಸವರಾಜ, ಕೆ.ಹುಸೇನಪ್ಪ, ಶಿವಣ್ಣ ಬೆಣಕಲ್, ಶ್ರೀನಿವಾಸ ಹೊಸಳ್ಳಿ, ಮರಿನಾಗಪ್ಪ ಡಗ್ಗಿ, ಕೃಷ್ಣನಾಯಕ, ಶಿವಕುಮಾರ ಈಚನಾಳ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net