ಆರ್ಥಿಕವಾಗಿ ಹಿಂದುಳಿದ ವಿಪ್ರರಿಗೆ ನೇಮಕಾತಿಯಲ್ಲಿ ಪ್ರಾಧಾನ್ಯತೆ ನೀಡಲಿ

WhatsApp Image 2022-08-01 at 1.32.48 PM (1)
ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿಪ್ರರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದ ಶೇ.೧೦ ರಷ್ಟು ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿಯನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ವತಿಯಿಂದ ಸೋಮವಾರ ವಿಜಯಪುರಕ್ಕೆ ಆಗಮಿಸಿದ್ದ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
Published on

ವಿಜಯಪುರ: ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿಪ್ರರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದ ಶೇ.೧೦ ರಷ್ಟು ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿಯನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ವತಿಯಿಂದ ಸೋಮವಾರ ವಿಜಯಪುರಕ್ಕೆ ಆಗಮಿಸಿದ್ದ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮೇಲ್ವರ್ಗದ ಸಮುದಾಯಗಳಲ್ಲೂ ಅತ್ಯಂತ ಕಡುಬಡವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಹಾಗಾಗಿ ಕೇಂದ್ರ ಸರ್ಕಾರವು ಸಾಮಾನ್ಯ ಪಂಗಡದ ಅಭ್ಯರ್ಥಿಗಳಿಗೆ ಶೇ.೧೦ ರಷ್ಟು ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಲ್ಪಿಸಿದೆ. ರಾಜ್ಯ ಸರ್ಕಾರವು ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಇನ್ನೂ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಆರ್ಥಿಕ ರೇಖೆಯಿಂದ ಕೆಳಗಿದ್ದ ಎಷ್ಟೋ ವಿಪ್ರರು ಹಾಗೂ ಇತರ ಸಮುದಾಯದವರು ವಂಚಿತರಾಗುತ್ತಿದ್ದಾರೆ ಎಂದು ಮನವಿ ಮಾಡಿದರು.

ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಮುಕುಂದ ಕುಲಕರ್ಣಿ, ಉಪಾಧ್ಯಕ್ಷ ಬಿ.ಆರ್ ನಾಯಕ, ನಗರ ಅಧ್ಯಕ್ಷ ಪ್ರಶಾಂತ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಪವನ ಕುಲಕರ್ಣಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಮೀರ ಕುಲಕರ್ಣಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net