ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ

12 pnh 1
ಸಿಂಗಟಗೆರೆಯ ಶ್ರೀ ಕಲ್ಲೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಎಸ್.ಜಿ.ರಾಮಪ್ಪ, ಬಿ.ಕೆ.ನಾಗರಾಜಪ್ಪ, ಎಸ್.ಆರ್.ರಾಜಾನಾಯ್ಕ ಇದ್ದರು.
Published on

ಪಂಚನಹಳ್ಳಿ: ಪಠ್ಯದ ಚಟುವಟಿಕೆ ಜತೆಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡುವುದು ಶಿಕ್ಷಕರು ಮತ್ತು ಪಾಲಕರ ಆದ್ಯ ಕರ್ತವ್ಯ ಎಂದು ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜನಾಯ್ಕ ತಿಳಿಸಿದರು.
ಗುರುವಾರ ಶ್ರೀ ಕಲ್ಲೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಸಿಂಗಟಗೆರೆಯಲ್ಲಿ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಹ ದೊಡ್ಡ ಮಟ್ಟದ ಸಾಧನೆ ಮಾಡಬಹುದು ಎಂದು ತಿಳಿಸಿಕೊಟ್ಟರು.
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಾನಾಯ್ಕ ಮಾತನಾಡಿ, ಮಕ್ಕಳಿಗೆ ಕಲಿಕೆ ಹಂತದಲ್ಲಿಯೇ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಮುಂತಾದ ಪಠ್ಯೇತರ ಚಟುವಟಿಕೆಗಳನ್ನು ಪಾಲಿಸಿದರೆ ಆದಲ್ಲಿ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಕೆ.ಈ.ಮಲ್ಲಿಕಾರ್ಜುನ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರಿ ಮತ್ತು ಸಾಧನೆ ಮುಟ್ಟಲು ಶ್ರದ್ಧೆ ಮತ್ತು ಆಸಕ್ತಿ ಮುಖ್ಯ. ಪದವಿ ಪೂರ್ವ ವಯಸ್ಸಿನಲ್ಲಿ ಹೆಚ್ಚು ಓದಿನ ಕಡೆ ಗಮನವರಿಸಿದರೆ ಅವು ಮುಂದಿನ ಹಂತದ ಶಿಕ್ಷಣಕ್ಕೆ ಅನೇಕ ದಾರಿ ಮಾಡಿಕೊಡುತ್ತದೆ. ಮೊಬೈಲ್ ಇಂದು ವಿದ್ಯಾರ್ಥಿ ಜೀವನದಲ್ಲಿ ಅನೇಕ ಪ್ರತಿಭೆಗಳನ್ನು ನಾಶ ಮಾಡುತ್ತಿದೆ ಎಂದು ತಿಳಿಸಿದರು.
ಕಾಲೇಜಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಧ್ಯಕ್ಷ ಎಸ್.ಜಿ. ರಾಮಪ್ಪ, ಬಿ.ಕೆ.ನಾಗರಾಜಪ್ಪ, ಎಸ್.ಆರ್.ರಾಜಾನಾಯ್ಕ, ಮಧುಮಾಲ ಜಿ.ಆರ್, ಎಸ್. ಕುಬೇಂದ್ರ, ಪ್ರಸಾದ್, ಬಿ.ಪಿ.ದೇವಾನಂದ, ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net