

ಕೂಡ್ಲಿಗಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕು ಎಂದು ಕೊಟ್ಟೂರು ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಜಿ. ಚಿತ್ತರಂಜನ್ ಹೇಳಿದರು.
ಪಟ್ಟಣದ ವಾಸವಿ ವಿದ್ಯಾ ಮಂದಿರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ವಾಲಿಬಾಲ್ ಪಂದ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: ಮಕ್ಕಳು ಪಠ್ಯೇತರ ಚಟುವಟಿಕೆಗಳಲೂ ಭಾಗವಹಿಸುವಂತಾಗಲಿ
ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಆಟ, ಪಾಠ, ಸಾಂಸ್ಕೃತಿಕ ಚಟುವಟಿಗಳಲ್ಲಿ ಅಗಾದ ಪ್ರತಿಭೆ ಹೊಂದಿದ್ದಾರೆ. ಇವರಿಗೆ ಸೂಕ್ತ ವೇದಿಕೆ ಕಲ್ಪಿಸಿ ಎತ್ತರಕ್ಕೆ ಬೆಳೆಯುವಂತೆ ಮಾಡಬೇಕು. ಗ್ರಾಮೀಣ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೂ ಆಯ್ಕೆಯಾಗಿ ಇತರರಿಗೆ ಮಾದರಿಯಾಗಬೇಕು ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಿ. ಮಂಜುನಾಥ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಹನುಮೇಶ್, ಪ್ರಧಾನ ಕಾರ್ಯದರ್ಶಿ ಬಿ.ಎಂ. ಭರತೇಶ್ ಕುಮಾರ್,
ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಬಸಪ್ಪ, ಉಪಾಧ್ಯಕ್ಷ ಕೆಂಗನಗೌಡ, ಪ್ರಮುಖರಾದ ನಾಗಭೂಷಣ, ರಮೇಶ್, ಮಹೇಂದ್ರ, ನಾಗರಾಜ, ಸಂತೋಷ, ಕರಿಬಸಪ್ಪ, ಪ್ರಕಾಶ್ ಇದ್ದರು.