ಸಮಗ್ರ ಕೃಷಿಗೆ ಆದ್ಯತೆ ನೀಡಿ

5 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೃಷಿ ವಿಶ್ವ ವಿದ್ಯಾಲಯದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಮಣ್ಣು ವಿಜ್ಞಾನ ಹಾಗೂ ರಾಸಾಯನಿಕಶಾಸ್ತ್ರ ವಿಭಾಗದ ಸಹಯೋಗದಲ್ಲಿ ಕೃವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ವಿಶ್ವ ಮಣ್ಣು ದಿನ ಆಚರಿಸಲಾಯಿತು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ ಕುಮಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿಯಲ್ಲಿ ಮಣ್ಣಿನ ಫಲವತ್ತತೆ ಹಾಗೂ ಉತ್ಪಾದಕತೆ ಹೆಚ್ಚಿಸುವಲ್ಲಿ ಸಂಘ ಸಂಸ್ಥೆಗಳು, ರೈತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದ ಅವರು, ಮಣ್ಣು ಮತ್ತು ನೀರು ರಕ್ಷಣೆಯ ಮಹತ್ವ ವಿವರಿಸಿದರು.
ವಿಸ್ತರಣಾ ನಿರ್ದೇಶಕ ಡಾ. ಎಸ್.ಎಸ್. ಅಂಗಡಿ ಮಾತನಾಡಿ, ಬೆಳೆ ಪರಿವರ್ತನೆ ಮಾಡಿದಲ್ಲಿ ಮಣ್ಣಿನ ಫಲವತ್ತತೆ ಹಾಗೂ ಉತ್ಪಾದಕತೆ ಹೆಚ್ಚಿಸಬಹುದು. ರೈತರು ಹೆಚ್ಚು ಸಮಗ್ರ ಕೃಷಿಗೆ ಪ್ರಾಧಾನ್ಯತೆ ಕೊಡಬೇಕು ಎಂದರು.
ಡಾ. ವಿ.ಆರ್. ಕಿರೇಸೂರ ಅಧ್ಯಕ್ಷತೆ ವಹಿಸಿದ್ದರು. ಐದು ಜನ ರೈತರಿಗೆ ಮಣ್ಣು ಆರೋಗ್ಯ ಚೀಟಿ ವಿತರಣೆ, ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 3 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ರೈತ ಮಹಿಳೆಯರು, ವಿದ್ಯಾರ್ಥಿಗಳು, ಅಧಿಕಾರಿಗಳು, ಇತರರು ಇದ್ದರು. ಡಾ. ಮಂಜುನಾಥ ಹೆಬ್ಬಾರ ಸ್ವಾಗತಿಸಿದರು. ವಿದ್ಯಾಧಿಕಾರ ಡಾ. ಎಚ್.ಬಿ. ಬಬಲಾದ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪ್ರವೀಣ ಗೋರೊಜಿ ನಿರೂಪಿಸಿದರು. ಡಾ.ಡಿ.ಎನ್. ಕಂಬ್ರೇಕರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net