ಕ್ರೀಡೆಗಳಿಗೆ ಆದ್ಯತೆ ನೀಡಿ

11-npk-4
Published on

ನಾಪೋಕ್ಲು: ಕ್ರೀಡಾಕೂಟಗಳಲ್ಲಿ ಮಕ್ಕಳು ಭಾಗವಹಿಸಿದರೆ ದೈಹಿಕ ಹಾಗೂ ಮಾನಸಿಕವಾಗಿ ಸಮಚಿತ್ತರಾಗುತ್ತಾರೆ. ಆದ್ದರಿಂದ ಕ್ರೀಡೆಗಳಿಗೆ ಮಹತ್ವ ನೀಡಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಸಮೀಪದ ಕಕ್ಕಬ್ಬೆಯ ಪ್ರೌಢಶಾಲಾ ಮೈದಾನದಲ್ಲಿ ಮೇದ ಜನಾಂಗದ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ 4ನೇ ವರ್ಷದ ಪುರುಷರ ಕ್ರಿಕೆಟ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಪಾಡಿಕಾರ ಕುಟುಂಬದ ಮುಖಂಡ ಎಂ.ಟಿ.ದಾಸಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ಕೆಪಿಸಿಸಿ ಉಪಾಧ್ಯಕ್ಷೆ ಶೈಲಾ ಕುಟ್ಟಪ್ಪ. ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ನಪ್ಪ, ಬುಡಕಟ್ಟು ಜನಾಂಗದ ಅಧ್ಯಕ್ಷ ಕುಡಿಯರ ಮುತ್ತಪ್ಪ, ಫೈನರಿ ಜಮಾತ್ ಅಧ್ಯಕ್ಷ ಶೌಕತ್ ಆಲಿ, ಅರಮನೆ ಪಾಲೆ ಜನಾಂಗದ ನಿರ್ದೇಶಕ ದೇವಯ್ಯ, ವೇದ ಜನಾಂಗದ ಜನಪದ ಕಲಾವಿದ ಸಾಬು ಚಿನ್ನಪ್ಪ, ಚೆಂದಮ್ಮ ಬೋಜಕ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಬಳಿಕ ವಿವಿಧ ಕ್ರೀಡಾಕೂಟಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net