ವಿದ್ಯೆ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ

21 TKE 3,3,3,3
Published on

ತರೀಕೆರೆ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹ ಸದೃಢವಾಗುವ ಜತೆಗೆ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಜ್ಞಾನ ಹೆಚ್ಚಿಸಿದರೆ, ಕ್ರೀಡೆ ನೋವು ಮರೆಸಿ ಮನಸ್ಸು ಉಲ್ಲಾಸಭರಿತಗೊಳಿಸಲಿದೆ. ಕಲಿಕಾ ಹಂತದಲ್ಲಿರುವ ಮಕ್ಕಳು ಶಿಕ್ಷಣದ ಜತೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಬೇಕು. ಮುಂದೆ ದೊಡ್ಡ ಸಾಧನೆ ಮಾಡಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗುವ ಗುರಿ ಹೊಂದಬೇಕು. ಸರ್ಕಾರ ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನಿಡಿದ್ದು, ಕ್ರೀಡಾ ಕೋಟಾದಡಿ ಆಯ್ಕೆಯಾಗಿ ಸುಭದ್ರ ಜೀವನ ರೂಪಿಸಿಕೊಳ್ಳಬೇಕು ಎಂದರು.
ತರೀಕೆರೆ ಶೈಕ್ಷಣಿಕ ವಲಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಲಿತಾಂಶದಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದು, ಬೇಸರ ಮೂಡಿಸಿದೆ. ಕಲಿಕೆಯಲ್ಲಿ ಹಿಂದಿರುವ ಮಕ್ಕಳ ಬಗ್ಗೆ ಶಿಕ್ಷಕರು ಆಸಕ್ತಿ ವಹಿಸದ ಕಾರಣ ಲಿತಾಂಶದಲಿ ಹಿನ್ನೆಡೆಯಾಗಿದೆ. ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಪ್ರಾಥಮಿಕ ಹಂತದಿಂದಲೇ ಮಕ್ಕಳನ್ನು ಉತ್ತೇಜಿಸಬೇಕು ಎಂದು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net