

ಎಂ.ಎನ್.ಕೋಟೆ: ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಿದಾಗ ಮಾತ್ರ ಯಶಸು ಕಾಣಲು ಸಾಧ್ಯವಾಗುತ್ತದೆ ಎಂದು ಬಿಆರ್ ಸಿ ಮಧುಸೂದನ್ ತಿಳಿಸಿದರು.
ಗುಬ್ಬಿ ತಾಲೂಕಿನ ಹೂವಿನಟ್ಟೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಾಗಲವಾಡಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಆರೋಗ್ಯ ವಾಗಿ ಇರಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಪ್ರಾಂಶುಪಾಲ ಮಲಗೌಡ ಮಾತನಾಡಿ, ಕ್ರೀಡೆ ಎಂಬುಂದು ವಿದ್ಯಾರ್ಥಿಗಳಿಗೆ ಅವಿಭಾಜ್ಯ ಅಂಗ. ಎಲ್ಲ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಕ್ರೀಡಾಪಟುವಾಗಿ ಬೆಳೆಯಬೇಕು.ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ಕಣ್ಮೆರೆಯಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡಾಸಕ್ತಿಗಳನ್ನು ಬೆಳೆಸಿಕೊಳಬೇಕು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳ ಸವೋರ್ತ್ತಮುಖ ಅಭಿವೃದ್ಧಿಗೆ ಕ್ರೀಡೆಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಜಹದೀಶ್, ಸಿಆರ್ಪಿ ಸೂರ್ಯಕಲಾ , ಶ್ರೀನಿವಾಸ್, ನರಸಿಂಹರಾಜು ಇದ್ದರು.