ಅಂಕ ಗಳಿಸುವ ಘಟಕಗಳಿಗೆ ಆದ್ಯತೆ ನೀಡಿ

18 HDLP 02
ಹೂವಿನಹಡಗಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಬಿಇಒ ಮಹೇಶ ಪೂಜಾರ್ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ ಇತರರಿದ್ದರು.
Published on

ಹೂವಿನಹಡಗಲಿ: ಪಠ್ಯಕ್ರಮ ಪೂರ್ಣಗೊಳಿಸಿ ಪುನರಾವರ್ತನೆ ಮಾಡಬೇಕು ಎಂದು ಹಿಂದಿ ಶಿಕ್ಷಕರಿಗೆ ಬಿಇಒ ಮಹೇಶ ಪೂಜಾರ ಸೂಚಿಸಿದರು.

ಪಟ್ಟಣದ ಜಿಪಿಜಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಹಿಂದಿ ಸಹ ಶಿಕ್ಷಕರ ಸಂಘದಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಬುಧವಾರ ಆಯೋಜಿಸಿದ್ದ ಹಿಂದಿ ವಿಷಯ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಹೆಚ್ಚು ಅಥವಾ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಗಮನಿಸಿ ಅವರಿಗೆ ವಿಶೇಷ ತರಬೇತಿ ನೀಡಬೇಕು. ಸುಲಭವಾಗಿ ಅಂಕಗಳಿಸುವ ಘಟಕಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಯಾವ ಘಟಕದಲ್ಲಿ ಹೆಚ್ಚಿನ ಪ್ರಶ್ನೆಗಳು ಪುನರಾವರ್ತನೆಯಾಗುತ್ತವೆ ಎಂಬುದನ್ನು ತಿಳಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಅಬ್ದುಲ್ ಕಲಾಂ ಶಿಕ್ಷಕರಿಗೆ ತರಬೇತಿ ನೀಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಅಹಮದ್, ಉಪ ಪ್ರಾಚಾರ್ಯೆ ಜಿ.ಕವಿತಾ, ರಾಜ್ಯ ಹಿಂದಿ ಶಿಕ್ಷಕರ ವೇದಿಕೆಯ ಸದಸ್ಯ ಎಲ್.ಖಾದರಬಾಷಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net