ಪಾತಪಾಳ್ಯ: ಇಂದಿನ ದಿನಮಾನದಲ್ಲಿ ಆರೋಗ್ಯ ಹಾಗೂ ಶಿಕ್ಷಣದ ಅವಶ್ಯಕತೆ ಇದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.ಸುಜ್ಞಾನಂಪಲ್ಲಿ (ಕಳ್ಳಿಪಲ್ಲಿ)ಯಲ್ಲಿ ಶುಕ್ರವಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೂತನಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲ ಶಿಕ್ಷಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಶಾಲೆಗೆ ಹಾಜರಾಗಿ ಗುಣಾತ್ಮಕ ಶಿಕ್ಷಣ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳು ಮಕ್ಕಳಿಗೆ ಲಭ್ಯವಿದ್ದು, ಉಪಯೋಗಿಸಿಕೊಳ್ಳುವಂತಾಗಬೇಕು. ಶಿಕ್ಷಣದಿಂದ ವಂಚಿತರಾಗದಂತೆ ಪಾಲಕರು ನೋಡಿಕೊಳ್ಳಬೇಕು. ಸ್ವಚ್ಛತೆ, ಪರಿಸರ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದರು. ಕೆಡಿಪಿ ಸದಸ್ಯ ರಾಮಕೃಷ್ಣ, ಜಿಪಂ ಮಾಜಿ ಸದಸ್ಯರಾದ ಶ್ರೀನಿವಾಸ, ನರಸಿಂಹಪ್ಪ, ಮುಖಂಡರಾದ ಚಂದ್ರಶೇಖರರೆಡ್ಡಿ, ಈಶ್ವರರೆಡ್ಡಿ, ಗ್ರಾಪಂ ಸದಸ್ಯರಾದ ಚಿನ್ನಮಲ್ಲಕ್ಕ, ಲಕ್ಷಿ$್ಮಪತಿರೆಡ್ಡಿ, ವೇಣುಗೋಪಾಲ, ಬಿಆರ್ಪಿಶಿವಪ್ಪ, ಸಿಆರ್ಪಿ ಹನುಮಂತಪ್ಪಇದ್ದರು.