ಚಂದ್ರಶೇಖರನ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಿ

ex dcm k.s.eshwarappa visit chandrasheakran home
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ನಿವಾಸಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯರಾದ ಗನ್ನಿ ಶಂಕರ್, ಇ.ವಿಶ್ವಾಸ್, ಭೂಪಾಲ್, ಸೀತಾಲಕ್ಷ್ಮಿ ಮತ್ತಿತರರಿದ್ದರು.
Published on

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಭ್ರಷ್ಟಾಚಾರ ಬಯಲಿಗೆಳೆದು ನಂತರ ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ನೀತಿಸಂಹಿತೆ ಮುಕ್ತಾಯದ ಬಳಿಕ ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ 50 ಲಕ್ಷ ರೂ. ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

ರಾಜ್ಯ ಸರ್ಕಾರ ಚಂದ್ರಶೇಖರನ್ ಅವರ ಡೆತ್‌ನೋಟ್ ಅನ್ನು ಗಂಭೀರವಾಗಿ ಪರಿಗಣಿಸಬೇಕು. ಮೃತನ ಕುಟುಂಬ ಸದಸ್ಯರೊಬ್ಬರಿಗೆ ನೌಕರಿ ಕೊಡಬೇಕು. ಅಧಿಕಾರಿಯ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು. ಕುಟುಂಬಕ್ಕೆ ವೈಯಕ್ತಿಕವಾಗಿ 3 ಲಕ್ಷ ರೂ. ನೆರವು ನೀಡಿದ್ದೇನೆ. ಒಂದು ವೇಳೆ ಸರ್ಕಾರ 50 ಲಕ್ಷ ರೂ. ನೀಡದಿದ್ದರೆ ನಾನೇ ಶಿವಮೊಗ್ಗದ ದಾನಿಗಳ ನೆರವಿನಿಂದ ಸಂಗ್ರಹಿಸಿ ಕೊಡಿಸುತ್ತೇನೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಾನು ಚಂದ್ರಶೇಖರನ್ ಮನೆಗೆ ಭೇಟಿ ನೀಡಿದ್ದೆ. ಬ್ಯಾಂಕ್‌ನಲ್ಲಿ ಚಿನ್ನಾಭರಣ ಅಡವಿಟ್ಟು 20 ಲಕ್ಷ ರೂ. ಸಾಲ ಪಡೆದಿದ್ದಾರೆ. ಆದರೆ ನಿಗಮದ ಮೇಲಧಿಕಾರಿಗಳು ಮಾತ್ರ ಕೋಟಿ ಕೋಟಿ ಹಣ ಲೂಟಿ ಮಾಡಿ ಐಶಾರಾಮಿ ಜೀವನ ನಡೆಸುತ್ತಿದ್ದಾರೆ ಎಂದರು. ಪ್ರಮುಖರಾದ ಶಂಕರ ಗನ್ನಿ, ಇ.ವಿಶ್ವಾಸ್, ಮಹಾಲಿಂಗ ಶಾಸ್ತ್ರಿ, ಎಂ.ಜಿ.ಬಾಲು, ಕಾಚಿನಕಟ್ಟೆ ಸತ್ಯನಾರಾಯಣ ಸುದ್ದಿಗೋಷ್ಠಿಯಲ್ಲಿದ್ದರು.

ಚಂದ್ರಶೇಖರನ್ ಕುಟುಂಬಕ್ಕೆ ಕೆಎಸ್‌ಇ ಸಾಂತ್ವನ
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ನಿವಾಸಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅವರಿಗೆ ಮೂರು ಲಕ್ಷ ರೂ. ಮೌಲ್ಯದ ಚೆಕ್ ಅನ್ನು ವಿತರಿಸಿದರು. ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯರಾದ ಗನ್ನಿ ಶಂಕರ್, ಇ.ವಿಶ್ವಾಸ್, ಭೂಪಾಲ್, ಸೀತಾಲಕ್ಷ್ಮಿ ಮತ್ತಿರತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net