

ಮುದ್ದೇಬಿಹಾಳ: ವಿಜಯಪುರದಲ್ಲಿ ಇಟ್ಟಂಗಿ ಬಟ್ಟಿ ಕಾರ್ಮಿಕರ ಮೇಲೆ ನಡೆದ ಹಲ್ಲೆ ಖಂಡಿಸಿ, ಹಲ್ಲೆಕೋರರಿಗೆ ಕಠಿಣ ಶಿಕ್ಷೆ ಮತ್ತು ಹಲ್ಲೆಗೊಳಗಾದವರಿಗೆ ಭದ್ರತೆ, ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗ ಜನ ಸಂಘ ಹೋರಾಟ ಸಮಿತಿ ತಾಲೂಕು ಘಟಕ, ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಹಸೀಲ್ದಾರ್ ಕಚೇರಿಯ ಶಿರಸ್ತೆದಾರರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಹೊಟ್ಟೆಪಾಡಿಗಾಗಿ ದುಡಿಯಲು ಬಂದಿದ್ದ ಕಾರ್ಮಿಕರಾದ ಉಮೇಶ ಮಾದರ, ಸದಾಶಿವ ಬಬಲಾದಿ, ಉಮೇಶ ದೇ. ಮಾದರ ಇವರಿಗೆ ನ್ಯಾಯ ದೊರಕಿಸಿಕೊಡಬೇಕು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆರೋಪಿಗಳನ್ನು ಬಂಧಿಸಬೇಕು. ಹಲ್ಲೆಗೊಳಗಾದ ಕುಟುಂಬಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು, ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ನೀಡಬೇಕು. ಸರ್ಕಾರಿ ನೌಕರಿ ನೀಡಬೇಕು. ಬಟ್ಟಿ ಮಾಲೀಕನಿಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲಾ ದೌರ್ಜನ್ಯ ನಿವಾರಣಾ ಸಮಿತಿ ಮಾಜಿ ನಾಮನಿರ್ದೇಶಿತ ಸದಸ್ಯ ಬಸವರಾಜ ಪೂಜಾರಿ ಸಿದ್ದಾಪೂರ, ತಾಲೂಕು ಅಧ್ಯಕ್ಷ ಮುತ್ತಪ್ಪ ಮಾದರ ಅಮರಗೋಳ, ದುರಗಪ್ಪ ಅಮರಗೋಳ, ಪ್ರಶಾಂತ ಹಂಡರಗಲ್ಲ, ಮಲ್ಲು ಮೂಲಿನಮನಿ, ರಾಜು ಅಮರಗೋಳ, ಬಾಲು ಅಮರಗೋಳ, ಸಂತೋಷ ಅಮರಗೋಳ, ಅಭಿಲಾಷ ಅಮರಗೋಳ, ಕೃಷ್ಣ್ಣ ಅಮರಗೋಳ ಇದ್ದರು.