

ರಾಯಚೂರು: ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ದಲಿತ ಮುಖಂಡ ಪ್ರಸಾದ್ ಕೊಲೆಗೈದವರಿಗೆ ಕಠಿಣ ಶಿಕ್ಷೆ ವಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಮೃತನ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿ 4 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಸಾದನನ್ನು ಭೀಕರವಾಗಿ ಕೊಲೆ ಮಾಡಿರುವುದರ ಹಿಂದೆ ಅಕ್ಕಿ ಮತ್ತು ಮರಳು ಅಕ್ರಮ ದಂಧೆಕೋರರ ಕೈವಾಡವಿದ್ದು, ಅಕ್ರಮ ಕೆಲಸಕ್ಕೆ ಅಡ್ಡಿಯಾಗುತ್ತಾನೆ ಎಂದು ಕೊಲೆ ಮಾಡಿಸಲಾಗಿದೆ. ದಲಿತರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸದೇ ದಲಿತರ ಕಗ್ಗೋಲೆ ನಡೆಸಲಾಗುತ್ತಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಡಳಿತ ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ಕ್ರಮಕೈಗೊಳ್ಳಬೇಕು. ಪ್ರಸಾದ ಕುಟುಂಬಕ್ಕೆ ರಕ್ಷಣೆ ನೀಡುವುದರ ಜತೆಗೆ ಅಗತ್ಯ ಸೌಕರ್ಯ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಎಸ್.ಮಾರೆಪ್ಪ, ಪದಾಕಾರಿಗಳಾದ ಎಂ.ಈರಣ್ಣ, ಹೇಮರಾಜ ಅಸ್ಕಿಹಾಳ, ಜೆ.ಬಿ.ರಾಜು, ಎಂ.ಆರ್.ಭೇರಿ, ಶ್ರೀನಿವಾಶ ಕಲವಲದೊಡ್ಡಿ, ಹನುಮಂತ ಮನ್ನಾಪುರ, ಆಂಜಿನಯ್ಯ ಕುರುಬದೊಡ್ಡಿ, ಎಸ್.ಹುಲಿಗೆಪ್ಪ, ಹನುಮಂತ ಕೋಟೆ, ನರಸಿಂಹಲು ಪಾಲ್ಗೊಂಡಿದ್ದರು.