ಹುಬ್ಬಳ್ಳಿಗೆ ವಿಶೇಷ ಅನುದಾನ ನೀಡಿ

tenginakayi
Published on

ಹುಬ್ಬಳ್ಳಿ: ರಾಜ್ಯ ಸರ್ಕಾರ ಹುಬ್ಬಳ್ಳಿ ನಗರದ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ಬಜೆಟ್ ಕುರಿತು ಮಾತನಾಡಿದ ಅವರು, ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವನ್ನೊಳಗೊಂಡ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಸಾರಿಗೆ ಇಲಾಖೆಗಳ ಅನುದಾನವನ್ನು ಪ್ರಸಕ್ತ ಬಜೆಟ್‌ನಲ್ಲಿ ಕಡಿತಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net