ಸಿಹಿ, ಗುಲಾಬಿ ನೀಡಿ ಸ್ವಾಗತ

ಸಿಹಿ, ಗುಲಾಬಿ ನೀಡಿ ಸ್ವಾಗತ
Published on

ಬೇಲೂರು: ತಾಲೂಕಿನ ಅಂಗಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ನೇತೃತ್ವದಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಗುಲಾಬಿ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.

ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸುವ ಕಾರ್ಯಕ್ರಮ ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ತಾಲೂಕಿನಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈಗಾಗಲೆ ಎಲ್ಲ ಶಾಲೆಗಳಿಗೂ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಪೂರೈಕೆಯಾಗಿದೆ. ಗುಣಾತ್ಮಕ ಕಲಿಕೆಗಾಗಿ ಪ್ರಸ್ತುತ ಶೈಕ್ಷಣಿಕ ಬಲವರ್ಧನ ವರ್ಷ 2024 ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇಂದಿನಿಂದಲೇ ಶಾಲೆಗಳಲ್ಲಿ ಪಾಠಗಳು ಪ್ರಾರಂಭವಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡುವುದರಿಂದ ನುರಿತ ಅನುಭವಿ ಶಿಕ್ಷಕರೊಂದಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಕಂಪ್ಯೂಟರ್ ಕಲಿಕೆ ಸೇರಿದಂತೆ ಹಲವು ಯೋಜನೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಅಂಗಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಣ್ಣಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷಮೂರ್ತಿ, ಶಿಕ್ಷಣ ಸಂಯೋಜಕ ಗೋಪಾಲ್, ಶಿಕ್ಷಣ ಸಂಪನ್ಮೂಲ ವ್ಯಕ್ತಿ ಶಾಂತಿ, ಮುಖ್ಯ ಶಿಕ್ಷಕ ವಿಠಲ ಮೂರ್ತಿ, ಗ್ರಾಮಸ್ಥರು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net