

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಕೂಡ ಮುರಿದು ಬೀಳುತ್ತಿವೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುವುದಕ್ಕೆ ನಾಗರಿಕರ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ ಅಥವಾ ಅಪಾಯ ಸ್ಥಿತಿಯಲ್ಲಿರುವ ಮರಗಳು ಹಾಗೂ ಒಣಗಿರುವ ರೆಂಬೆ-ಕೊಂಬೆಗಳನ್ನು ಪಾಲಿಕೆಯ ಅರಣ್ಯ ವಿಭಾಗದಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸುತ್ತಿದೆ. ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಒಣಗಿರುವ, ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಬಹುದಾಗಿದೆ.
ಉಚಿತವಾಗಿ ಸಸಿಗಳ ವಿತರಣೆ:
ಬಿಬಿಎಂಪಿಯ ಅರಣ್ಯ ಘಟಕ ವತಿಯಿಂದ ಪರಿಸರ ಕಾಳಜಿ ಉತ್ತೇಜಿಸಲು ಉಚಿತವಾಗಿ ಸಸಿಗಳನ್ನು ಸಾರ್ವಜನಿಕರಿಗೆ ಹಾಗೂ ಸ್ವಯಂಸೇವಾ ಸಂಸ್ಥೆಗಳಿಗೆ ವಿತರಿಸಲಾಗುತ್ತಿದೆ. ಕೂಡ್ಲು, ಅಟ್ಟೂರು, ಕೆಂಪಾಪುರ ಹಾಗೂ ಜ್ಞಾನಭಾರತಿ ಸಸಸ್ಯಕ್ಷೇತ್ರಗಳನ್ನು ಸಂಪರ್ಕಿಸಿ, ಅರ್ಜಿ ನೀಡಿ ಗಿಡಗಳನ್ನು ಪಡೆಯಬಹುದಾಗಿದೆ ಎಂದು ಬಿಬಿಎಂಪಿಯ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ. ಸ್ವಾಮಿ ತಿಳಿಸಿದ್ದಾರೆ.
ಉಚಿತ ಸಸಿಗಳು ಸಿಗುವ ಸಸ್ಯಕ್ಷೇತ್ರಗಳು:
ಸ್ಥಳ ವಲಯ ದೂರವಾಣಿ ಸಂಖ್ಯೆ
ಕೂಡ್ಲು ಬೊಮ್ಮನಹಳ್ಳಿ 9480685539
ಅಟ್ಟೂರು ಯಲಹಂಕ 9483139438
ಕೆಂಪಾಪುರ ಮಹದೇವಪುರ 9480685541
ಜ್ಞಾನಭಾರತಿ ಆರ್.ಆರ್.ನಗರ 9880516322