ವಿದ್ಯಾರ್ಥಿನಿಲಯ ಸ್ಥಾಪನೆಗೆ ಆದ್ಯತೆ ನೀಡಿ

16ark1
module: NormalModule; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 49.0;
Published on

ಅರಕಲಗೂಡು: ವೀರಶೈವ ಮಹಾಸಭಾ ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳು ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಸಂಕಲ್ಪ ತೊಟ್ಟು ಕಾರ್ಯ ನಿರ್ವಹಿಸಬೇಕು ಎಂದು ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.


ಪಟ್ಟಣದ ಚನ್ನ ಬಸವೇಶ್ವರರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ವೀರಶೈವ ಲಿಂಗಾಯತ ಮಹಸಭಾ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ನೂತನ ಪದಾಧಿಕಾರಿಗಳು ಅಧಿಕಾರ ನಡೆಸುವುದಕ್ಕೆ ಅಲ್ಲ, ಮುಖ್ಯವಾಗಿ ಸಮಾಜದ ಜನರ ಬೆಂಬಲಕ್ಕೆ ನಿಂತು ದಬ್ಬಾಳಿಕೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡಬೇಕು. ಸಮಾಜದಲ್ಲಿ ಸಾಮರಸ್ಯ ಮೂಡಿಸಬೇಕು. ಸಮಾಜದ ಜನರ ಶಿಕ್ಷಣಕ್ಕೆ ನೆರವಾಗಬೇಕು. ಹಾಸನದಲ್ಲಿ ವಿದ್ಯಾರ್ಥಿನಿಲಯ ಸ್ಥಾಪಿಸಲು ಆದ್ಯತೆ ನೀಡಬೇಕು ಎಂದ ಅವರು, ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆ ಮಾಡಿರುವುದು ಸೂಕ್ತ. ಮುಂದಿನ ದಿನಗಳಲ್ಲಿ ಹೆಚ್ಚಿನ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ಹೇಳಿದರು.


ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಮಾತನಾಡಿ, ಜಗತ್ತಿಗೆ ಅನ್ನ ಹಾಕುವ ಸಂಸ್ಕೃತಿಯಲ್ಲಿ ಬೆಳೆದ ವೀರಶೈವ ಲಿಂಗಾಯತ ಸಮಾಜ ಯಾವುದಕ್ಕೂ ಕಳಂಕ ತರದಂತೆ ನಡೆದುಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿರಬೇಕು ಎಂದರು.


ನಿವೃತ್ತ ಶಿಕ್ಷಕ ಬೆಟ್ಟಸೋಗೆ ಶಿವಮೂರ್ತಿ ಮಾತನಾಡಿದರು. ಶಿರದನಹಳ್ಳಿ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್, ತಾಲೂಕು ಘಟಕದ ಅಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಎನ್.ರವಿಕುಮಾರ್, ನಿವೃತ್ತ ಶಿಕ್ಷಕ ಟಿ. ಮಲ್ಲೇಶ್, ಕುಮಾರಸ್ವಾಮಿ, ಶಿವರಾಜ್, ಬಸವರಾಜು, ಲೋಕೇಶ್, ಯೋಗಣ್ಣ, ವೀರೇಶ್, ಶಿವಕುಮಾರ್, ಹೇಮಲತಾ, ಕಮಲಮ್ಮ, ಭಾರತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net