ದಾಖಲೆ ಸರಿ ಇದ್ದರೆ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ

088Kush03
Published on

ಕುಶಾಲನಗರ: ಹೆಬ್ಬಾಲೆ ಗ್ರಾಮದಲ್ಲಿರುವ ಕುಶಾಲನಗರ ವಿಶ್ವಕರ್ಮ ಸಮಾಜದ ನಿವೇಶನದ ದಾಖಲೆಗಳನ್ನು ಸರಿಪಡಿಸಿಕೊಂಡುಬಂದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಹಕರಿಸುವುದಾಗಿ ಶಾಸಕ ಮಂತರ್ ಗೌಡ ಹೇಳಿದರು.


ಪಟ್ಟಣದ ಗಾಯತ್ರಿ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆದ ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ 20ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಕುಂಕುಮಾರ್ಚನೆ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮುದಾಯದವರು ಸಂಘಟಿತರಾಗಿ ಮುನ್ನಡೆದರೆ ತನ್ನ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸುಲಭವಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿದ್ದ ಅರಕಲಗೂಡಿನ ಅರೆ ಮಾದನಹಳ್ಳಿ ಮಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಮಾತನಾಡಿ, ಶಾಸಕರು ಸರ್ಕಾರ ಮಟ್ಟದಲ್ಲಿ ಪ್ರಭಾವ ಬೀರಿ ಸಮುದಾಯಕ್ಕೆ ಶಾಶ್ವತ ಕಟ್ಟಡ ನಿರ್ಮಿಸಲು ಸಹಕರಿಸುವಂತೆ ಕೋರಿದರು.


ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಎಚ್.ಬಿ.ಲಿಂಗಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಎಸ್.ಜೆ.ದೇವರಾಜ್, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಮಹೇಶ್ ಆಚಾರ್ಯ, ಕುಶಾಲನಗರ ತಾಲೂಕು ಗೌರವಾಧ್ಯಕ್ಷ ಎಚ್.ವಿ.ರಾಜಾಚಾರ್, ವಿ.ಕುಮಾರ್, ನಾಗಣ್ಣಾಚಾರ್, ಕೆ.ಬಿ.ಮೋಹನ್, ಕೆ.ಎಸ್. ಲಲಿತಾ ವರದರಾಜ್, ಭಾರತಿ ನಾಗೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net