

ಉಡುಪಿ: ಅನಿವಾಸಿ ಕನ್ನಡಿಗರ ಯೋಗಕ್ಷೇಮ ನೋಡಿಕೊಳ್ಳುವುದಕ್ಕಾಗಿ ಕರ್ನಾಟಕದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ನಿಯಮಾವಳಿಗಳನ್ನು ರೂಪಿಸಲಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಎನ್ಆರ್ಐ ಫೋರಂನ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹೇಳಿದರು.
ಶುಕ್ರವಾರ ಮಣಿಪಾಲದಲ್ಲಿ ಮಾಹೆ ಸಹಯೋಗದಲ್ಲಿ ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ ವತಿಯಿಂದ ಆಯೋಜಿಸಿದ್ದ ಜಾಗತಿಕ ಆರೋಗ್ಯ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ತಂತ್ರಜ್ಞಾನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 218 ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯೂರ್ ಕೋಡ್ ಸ್ಕಾ$ನಿಂಗ್ ಮೂಲಕ ದಾಖಲಾತಿಗಳನ್ನು ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು. ಮಾಹೆ ಸಹ ಕುಲಾಧಿಪತಿ ಡಾ. ಎಸ್.ಎಸ್. ಬಲ್ಲಾಳ್, ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟದ ಮುಖ್ಯಸ್ಥ ಡಾ.ಸಂಪತ್ ಶಿವಾಂಗಿ ಮಾತನಾಡಿದರು. ಮಣಿಪಾಲ ಶಿಕ್ಷಣ ಸಂಸ್ಥೆಯ (ಮಾಹೆ) ಅಧ್ಯಕ್ಷ ಡಾ. ರಾಮದಾಸ್ ಪೈ ಅವರಿಗೆ ಜೀವಮಾನ ಶ್ರೇಷ್ಠ ಸಾಧಕ ಗೌರವ ನೀಡಲಾಯಿತು. ಡಾ. ವಾಸಂತಿ ಪೈ ಹಾಗೂ ಎಂಇಎಂಜಿ ಅಧ್ಯಕ್ಷ ಡಾ. ರಂಜನ್ ಪೈ ಅವರನ್ನು ಸನ್ಮಾನ ಸ್ವೀಕರಿಸಿದರು.
ಎಎಪಿಐ ಡಾ. ಅಂಜನಾ ಸಮದ್ದಾರ್, ಮಾಹೆ ಉಪಕುಲಪತಿ ಡಾ. ಎಂ.ಡಿ ವೆಂಕಟೇಶ್ ಉಪಸ್ಥಿತರಿದ್ದರು. ಮಾಹೆ ಪ್ರೊ ವೈಸ್ ಚಾನ್ಸಿಲರ್ ಡಾ. ಶರತ್ ರಾವ್ ಸ್ವಾಗತಿಸಿ, ಕೋಮಲಾ ಜೆನ್ನಿರ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.