ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

nitte
Published on

ಕಾರ್ಕಳ: ನಿಟ್ಟೆ ಪರಿಣಿತ ವಿಶ್ವವಿದ್ಯಾಲಯದ ಅಧೀನ ಸಂಸ್ಥೆ ಡಾ.ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಜಸ್ಟೀಸ್ ಕೆ.ಎಸ್.ಹೆಗ್ಡೆ ಉದ್ಯಮಾಡಳಿತ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಇತ್ತಿಚೆಗೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ವಿದ್ಯಾಸಂಸ್ಥೆಯ ಮಾರ್ಗದರ್ಶಕ, ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಿಟ್ಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಹಾಗೂ ಹಳೇ ವಿದ್ಯಾರ್ಥಿಗಳ ಸಂಘಟನೆಗಳ ನಿರ್ದೇಶಕ ಪ್ರಸನ್ನ ಆರ್.ಕೈಲಾಜೆ ಮುಖ್ಯ ಅತಿಥಿಗಳಾಗಿದ್ದರು.

ಪೂರ್ವ ವಿದ್ಯಾರ್ಥಿನಿ ಅನುರಾಧಾ ಭಟ್ ಪ್ರಾರ್ಥಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದರ್ವಿಶ್ ಮಮ್ಮಿ ಪ್ರಾಸ್ತಾವಿಕ ಮಾತನಾಡಿದರು. ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆ ಸಹಾಯಕ ಗ್ರಂಥಪಾಲಕ ಸತೀಶ್ ಶೆಟ್ಟಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸಭೆಗೆ ಪರಿಚಯಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಟ್ಟೆ ಉದ್ಯಮಾಡಳಿತ ಸಂಸ್ಥೆಯ ನಿರ್ದೇಶಕ ಡಾ.ಸುಧೀರ್ ಎಂ. ವಂದಿಸಿದರು. ಚೈತ್ರಾ ಕುಡ್ವ ಕಾರ್ಯಕ್ರಮ ನಿರೂಪಿಸಿದರು. ಸುಚರಿತ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಡಾ.ದಯಾನಂದ ಬಾಯಾರ್, ಹಳೇ ವಿದ್ಯಾರ್ಥಿ ಸಂಘದ ಸಂಯೋಜಕ ಅರ್ಚನಾ ಭಟ್ ಹಾಗೂ ಇತರರು ಸಹಕರಿಸಿದರು.

ಈ ಹಿಂದೆ ಕಾರ್ಯ ನಿರ್ವಹಿಸಿರುವ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿಶ್ವದೆಲ್ಲೆಡೆ ನೆಲೆಸಿರುವ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದ ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕ್ರೀಡೆಗಳು ನಡೆಯಿತು.

ವಿದ್ಯಾರ್ಥಿಗಳಿಗೆ ಗೌರವ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 21 ಪೂರ್ವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ಸಂದರ್ಭ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಚೈತ್ರಾ ಕುಡ್ವ, ಉಪಾಧ್ಯಕ್ಷರಾಗಿ ಅಬ್ದುಲ್ ರಜಾಕ್, ಕಾರ್ಯದರ್ಶಿ ಸತೀಶ್ ಶೆಟ್ಟಿ, ಖಜಾಂಚಿ ಅರ್ಚನಾ ಭಟ್ ಹಾಗೂ 9 ಮಂದಿಯನ್ನೊಳಗೊಂಡ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net