

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಅ.15ರಿಂದ 24ರವರೆಗೆ ನಮ್ಮೂರ ನಾಡಹಬ್ಬಶಿವಮೊಗ್ಗ ದಸರಾ-2023ರನ್ನು ಅತ್ಯಂತ ವೈಭವದಿಂದ ಆಚರಿಸಲಾಗುವುದು ಎಂದು ಮೇಯರ್ ಎಸ್.ಶಿವಕುಮಾರ್ ತಿಳಿಸಿದರು.
ಅ.15ರಂದು ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಲಿದ್ದು ಬೆಳಗ್ಗೆ 11ಕ್ಕೆ ಕೋಟೆ ರಸ್ತೆಯ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಶಾಸೀಯ ನೃತ್ಯಗಾತಿ ವೈಜಯಂತಿ ಕಾಶಿ ಅವರು ದಸರಾ ಉದ್ಘಾಟಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಚಿವ ಡಿ.ಸುಧಾಕರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ ಎಂಎಲ್‌ಸಿಗಳಾದ ಎಸ್.ರುದ್ರೇಗೌಡ, ಭಾರತೀಶೆಟ್ಟಿ, ಡಿ.ಎಸ್.ಅರುಣ್, ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ, ಆಡಳಿತ ಪಕ್ಷದ ನಾಯಕ ಎಸ್.ಜ್ಞಾನೇಶ್ವರ್, ಪ್ರತಿಪಕ್ಷ ನಾಯಕಿ ಮೆಹಖ್ ಷರ್ೀ ಮುಖ್ಯ ಅತಿಥಿಯಾಗಿದ್ದಾರೆ ಎಂದರು.
ಶಾಸಕ, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಉಪಮೇಯರ್ ಲಕ್ಷ್ಮೀಶಂಕರ ನಾಯ್ಕ, ಆಡಳಿತ ಪಕ್ಷದ ನಾಯಕ ಎಸ್.ಜ್ಞಾನೇಶ್ವರ್, ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಅನಿತಾ ರವಿಶಂಕರ್, ಮಂಜುಳಾ ಶಿವಣ್ಣ, ಇ.ವಿಶ್ವಾಸ್, ಸುನೀತಾ ಅಣ್ಣಪ್ಪ, ಸುರೇಖಾ ಮುರಳೀಧರ್, ಯು.ಎಚ್.ವಿಶ್ವನಾಥ್, ಪ್ರಭಾಕರ್, ಸುವರ್ಣಾ ಶಂಕರ್, ಧೀರರಾಜ್‌ಹೊನ್ನವಿಲೆ ಸುದ್ದಿಗೋಷ್ಠಿಯಲ್ಲಿದ್ದರು.