ಗೋ.ಬೆಟ್ಟಕ್ಕೆ ನ್ಯಾ. ಬಿ.ಎಸ್.ಪಾಟೀಲ್ ಭೇಟಿ

24-GPT-1
Published on

ಗುಂಡ್ಲುಪೇಟೆ: ಭಾನುವಾರ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕುಟುಂಬ ಸಮೇತ ಆಗಮಿಸಿ ಗೋಪಾಲನ ದರ್ಶನ ಪಡೆದರು.


ಭಾನುವಾರ ಬೆಳಗ್ಗೆ ಬೆಟ್ಟಕ್ಕೆ ಆಗಮಿಸಿದ ಬಿ.ಎಸ್.ಪಾಟೀಲ್, ಶೋಭಾ ದಂಪತಿಗೆ ಮುಜರಾಯಿ ಇಲಾಖೆ ವತಿಯಿಂದ ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ನೇತೃತ್ವದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭ ಸ್ವಾಗತ ನೀಡಿ ದೇವಾಲಯಕ್ಕೆ ಬರಮಾಡಿಕೊಳ್ಳಲಾಯಿತು. ಗೋಪಾಲನ ದರ್ಶನ ಪಡೆದ ನ್ಯಾಯಮೂರ್ತಿ, ಗೋಪಾಲಸ್ವಾಮಿ ಬೆಟ್ಟದ ಪ್ರಾಕೃತಿಕ ಸೌಂದರ್ಯಕ್ಕೆ ಮನಸೋತರು. ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ ಅರ್ಚಕರಿಂದ ಮಾಹಿತಿ ಪಡೆದುಕೊಂಡರು.


ಪ್ರಭಾರ ತಹಸೀಲ್ದಾರ್ ಮಂಜುನಾಥ್, ಮೈಸೂರು ಲೋಕಾಯುಕ್ತ ಎಸ್ಪಿ ಸುಚಿತ್, ಚಾಮರಾಜನಗರ ಲೋಕಾಯುಕ್ತ ಎಸ್ಪಿ ಕೆ.ಟಿ.ಮ್ಯಾಥ್ಯೂ ಥಾಮಸ್, ಸರ್ಕಲ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ, ಸಿಬ್ಬಂದಿ ಪ್ರಭುಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net