

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮಹಾಪವಮಾನ ಯಾಗ, ಶ್ರೀ ರಾಮತಾರಕ ಯಜ್ಞ, ಸಾಮೂಹಿಕ ಗೋಪೂಜೆಯ ಧರ್ಮಜಾಗೃತಿ ಸಭೆ ಸಂಪನ್ನಗೊಂಡಿತು.
ವಿಶ್ವ ಹಿಂದು ಪರಿಷತ್, ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ ಕಲ್ಲಡ್ಕ ಪ್ರಖಂಡ, ಶ್ರೀ ಮಹಾಪವಮಾನ ಯಾಗ ಸಮಿತಿ ಸಹಯೋಗದಲ್ಲಿ ಮಾಜಿ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಶ್ರೀ ಮಹಾ ಪವಮಾನಯಾಗ, ಶ್ರೀ ರಾಮತಾರಕ ಯಜ್ಞ, ಸಾಮೂಹಿಕ ಗೋಪೂಜೆ ನೆರವೇರಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಡಾ.ಕಮಲಾ ಪ್ರಭಾಕರ ಭಟ್ ದಂಪತಿ ದೀಪೋಜ್ವನೆಗೈಯುವ ಮೂಲಕ ಪವಮಾನ ಪಾರಾಯಣ, ಶ್ರೀರಾಮತಾರಕ ಯಜ್ಞ ಹಾಗೂ ಯಾಗಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಯಾಗ ಸಮಿತಿ ಅಧ್ಯಕ್ಷ ವಿಕಾಸ್ ಕುಮಾರ್ ಪಿ., ಮೋಂತಿಮಾರು ಕ್ಷೇತ್ರದ ಆಡಳಿತ ಮೊಕ್ತೇಸರ ಎಸ್.ಆರ್.ಸತೀಶ್ಚಂದ್ರ, ಯಾಗ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿಹಿಂಪ ಮಂಚಿ ಘಟಕದ ಅಧ್ಯಕ್ಷ ರಮೇಶ್ ರಾವ್ ಪತ್ತುಮುಡಿ ಯಾಗದ ಯಜಮಾನರಾಗಿ ಕಾರ್ಯ ನಿರ್ವಹಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಕ್ ಉಳಿಪಾಡಿ, ವಿಹಿಂಪ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ರಾ.ಸ್ವ.ಸೇ.ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್, ಕೈರಂಗಳ ಅಮೃತಧಾರ ಗೋಶಾಲೆ ಅಧ್ಯಕ್ಷ ಟಿ.ಜಿ.ರಾಜಾರಾಮ್ ಭಟ್, ವಿಹಿಂಪ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್ ಬೋಳಿಯಾರ್, ಮಾಧವ ಮಾವೆ, ರಾಮದಾಸ್ ಬಂಟ್ವಾಳ, ಸುಲೋಚನಾ ಜಿ.ಕೆ.ಭಟ್, ಮೋನಪ್ಪ ದೇವಸ್ಯ, ಚೆನ್ನಪ್ಪ ಆರ್.ಕೋಟ್ಯಾನ್, ಶಿವಪ್ರಸಾದ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರು ಭಾಗವಹಿಸಿದ್ದರು.