87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ Go Ru Channabasappa ಆಯ್ಕೆ

Go ru channabasappa
Published on

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್​ 20ರಿಂದ 22ರವರೆಗೂ ನಡೆಯಲಿರುವ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಡಿಸೆಂಬರ್​ 20ರಿಂದ ಮಂಡ್ಯಡಲ್ಲಿ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಭಾರೀ ಕುತೂಹಲ ಹುಟ್ಟಿಸಿತ್ತು. ಇದೀಗ ಕನ್ನಡ ಸಾಹಿತ್ಯ ಪರಿಷತ್ತು ಇದಕ್ಕೆ ತೆರೆ ಎಳೆದಿದ್ದು, ಅಂತಿಮವಾಗಿ ಗೊ.ರು. ಚನ್ನಬಸಪ್ಪ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನವೆಂಬರ್‌ 20ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net