

ಕಲಬುರಗಿ: ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ನಗರದ ಸೇಡಂ ರಸ್ತೆಯ ಓಂ ನಗರ ಗೇಟ್ ಬಳಿ ಬುಧವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಯಿತು. ಸಂಜೆ ವೇಳೆ ಅಕ್ರಮವಾಗಿ ಗೋವು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕೆಲವು ಹಿಂದೂ ಪರ ಸಂಟನೆ ಕಾರ್ಯಕರ್ತರು ವಾಹನ ತಡೆದಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರೂ ನಿಲ್ಲದೇ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ಆರೋಪಿಗಳನ್ನು ಶ್ರೀ ಬಂಧನ ಮಾಡಬೇಕು ಎಂದು ಆಗ್ರಹಿಸಿ ಸೇಡಂ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದ್ದರಿಂದ ಎರಡ್ಮೂರು ಗಂಟೆ ವಾಹನ ಸವಾರರು ಪರದಾಡುವಂತಾಯಿತು. ಪ್ರತಿಭಟನಾ ಸ್ಥಳಕ್ಕೆ ಡಿಸಿಪಿ ಪ್ರವಿಣ ನಾಯಕ, ಎಸಿಪಿ ಚಂದ್ರಶೇಖರ, ಸಿಪಿಐ ವಾಲಿಕಾರ ಸೇರಿ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದರು. ಎಂಬಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.