ದೆಹಲಿಗೆ ಹೋಗಿ ವರಿಷ್ಠರ ಜತೆ ಚರ್ಚೆ: ರಮೇಶ ಜಾರಕಿಹೊಳಿ

mla ramesh jarakiholi visit kse home
ಶಿವಮೊಗ್ಗದ ಈಶ್ವರಪ್ಪ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಕೆ.ಇ.ಕಾಂತೇಶ್ ಜತೆ ಚರ್ಚೆ ನಡೆಸಿದರು.
Published on

ಶಿವಮೊಗ್ಗ: ಹಾವೇರಿ-ಗದಗ ಲೋಕಸಭೆ ಟಿಕೆಟ್ ಸಿಗದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಶುಕ್ರವಾರ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಚರ್ಚಿಸಿ ಕುತೂಹಲ ಮೂಡಿಸಿದರು.

ಈಶ್ವರಪ್ಪ ಮತ್ತು ಅವರ ಪುತ್ರ ಕಾಂತೇಶ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಜತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಈಶ್ವರಪ್ಪ ಅವರಿಗೆ ಪದೇಪದೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದರು.
ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಬದಲಾವಣೆಗೆ ಸಾಕಷ್ಟು ಅವಕಾಶವಿದೆ. ಎಲ್ಲವೂ ಸರಿಹೋಗುತ್ತದೆ ಎನ್ನುವ ವಿಶ್ವಾಸವಿದೆ. ಈಗಲೂ ಕಾಂತೇಶ್‌ಗೆ ಹಾವೇರಿ ಟಿಕೆಟ್ ನೀಡಲು ಅವಕಾಶವಿದ್ದು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net