ಧರ್ಮದ ರಕ್ಷಣೆಗೆ ದೇವೀ ಶಕ್ತಿ

SUB
Published on

ಪಡುಬಿದ್ರಿ: ಬದುಕಿನ ಆಸೆಗೆ ಚ್ಯುತಿಬಾರದಂತೆ ಬದುಕುವುದೇ ಧರ್ಮ. ಅದನ್ನು ಕಾಪಾಡುವುದು ದೈವ ದೇವರು. ಧರ್ಮದ ರಕ್ಷಣೆ ಜತೆಗೆ ಜನಜೀವನಕ್ಕೆ ಮಾರಕವಾಗುವ ಮಹಾಮಾರಿಯಂತಹ ಪಿಡುಗು ಹೋಗಲಾಡಿಸುವ ಶಕ್ತಿ ಕಾಪು ಮಾರಿಯಮ್ಮನಿಗಿದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಒಡಿಯೂರು ಶ್ರೀ ಗುರುದೇವವತ್ತ ಸಂಸ್ಥಾನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ದಾನಿ ಕರುಣಾಕರ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ್ ಶೆಟ್ಟಿ, ಶಶಿಧರ್ ಶೆಟ್ಟಿ ಮಸ್ಕತ್, ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಆಡಳಿತ ಮೊಕ್ತೇಸರ ಪ್ರಸಾದ್ ಜಿ.ಶೆಣೈ, ಮಾಜಿ ಸಚಿವ ಬಿ.ನಾಗರಾಜ್ ಶೆಟ್ಟಿ, ಪುರಸಭೆ ಉಪಾಧ್ಯಕ್ಷೆ ಸರಿತಾ ಶಿವಾನಂದ, ಮುಖ್ಯಾಧಿಕಾರಿ ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಶೇಖರ್ ಸಾಲ್ಯಾನ್, ಯೋಗೀಶ್ ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು. ಕಾಪು ದಿವಾಕರ್ ಶೆಟ್ಟಿ ಸ್ವಾಗತಿಸಿದರು. ಅಶೋಕ್ ಪಕ್ಕಳ ಮುಂಬೈ ಹಾಗೂ ದಾಮೋದರ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ

ಮಧೂರು ಬಾಲಸುಬ್ರಹ್ಮಣ್ಯಂ ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಶ್ರೀ ದೇವಿ ನೃತ್ಯಾರಾಧನಾ ಕಲಾಕೇಂದ್ರ ವಿದುಷಿ ರೋಹಿಣಿ ಉದಯ್ ಬಳಗದವರಿಂದ ನೃತ್ಯವೈಭವ, ವಿಜಯಕುಮಾರ್ ಕೊಡಿಯಾಲ್‌ಬೈಲ್ ಬಳಗದವರಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net