ಗ್ರಾಪಂ ಪ್ರತಿನಿಧಿಗಳಿಗೆ ಹೆಚ್ಚಿದ ಜವಾಬ್ದಾರಿ

web 4
Published on

ಸಾಗರ: ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಪಂ ಸದಸ್ಯರ ಜವಾಬ್ದಾರಿ ಮಹತ್ವದ್ದು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಗಾಂಧಿ ಮಂದಿರದಲ್ಲಿ ಕಾಂಗ್ರೆಸ್​ನಿಂದ ಕಸಬಾ ಹೋಬಳಿಯ ವಿವಿಧ ಗ್ರಾಪಂಗಳಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತರನ್ನು ಅಭಿನಂದಿಸಿ ಮಾತನಾಡಿದ ಅವರು, ಗ್ರಾಪಂಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರು ಇನ್ನಷ್ಟು ಸಮರ್ಥವಾಗಿ ಆಡಳಿತ ನಡೆಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ನೂತನ ಸದಸ್ಯರು ತಮ್ಮ ಭಾಗದ ಸಮಗ್ರ ಅಭಿವೃದ್ಧಿಗೆ ವರದಾನವಾಗಿರುವ ಉದ್ಯೋಗ ಖಾತ್ರಿ ಯೋಜನೆ ಯಶಸ್ಸಿಗೆ ಪ್ರಯತ್ನಿಸಬೇಕು. ಗ್ರಾಪಂ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಸಂಘಟಿಸಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಕಸಬಾ ಹೋಬಳಿ ಸೇರಿ ಅನೇಕ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸ್ಥಳೀಯ ಬಿಜೆಪಿ ಶಾಸಕರು ಅಭಿವೃದ್ದಿ ಕೆಲಸ ಮಾಡಿಲ್ಲ. ಅವರಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ. ಶಾಸಕರು ಗ್ರಾಪಂ ಚುನಾವಣೆಯಲ್ಲಿ ಬಿಡುವಿಲ್ಲದೆ ಪ್ರಚಾರ ಮಾಡಿದ್ದಾರೆ. ಸಾಕಷ್ಟು ಹಣ ಖರ್ಚು ಮಾಡಿದರೂ ಬಿಜೆಪಿಗೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net