ಖೋಖೋದಲ್ಲಿ ಗೋಗೇರಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

GJD KHO KHO
Published on

ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದ ಜಿಎಚ್​ಎಸ್ ಪ್ರೌಢಶಾಲೆ ವಿದ್ಯಾರ್ಥಿಗಳು ಖೋ ಖೋ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಶಾಲೆಯ ಶಮೀರ ನದಾಫ್ ಗುಂಡು ಎಸೆತದಲ್ಲಿ ದ್ವಿತೀಯ, ದೇವೇಂದ್ರಗೌಡ 1500 ಮೀಟರ್ ಓಟದಲ್ಲಿ ಪ್ರಥಮ ಹಾಗೂ ಪ್ರತಿಭಾ ಮೂಲಿಮನಿ 800 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಸಿಬ್ಬಂದಿ, ಎಸ್​ಡಿಎಂಸಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಆರ್.ಎಸ್. ಇಟಗಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net