ಕೋರ್ಟ್ ಮೊರೆ ಹೋಗುವುದು ಸರಿಯಲ್ಲ

ex cm kumarswami press meet
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಶಿವಮೊಗ್ಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಇದ್ದರು.
Published on

ಶಿವಮೊಗ್ಗ: ದಕ್ಷಿಣ ಭಾರತದ ರಾಜ್ಯಗಳು ನ್ಯಾಯಾಲಯದ ಮೊರೆ ಹೋಗುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಈಗಾಗಲೇ ಕೇರಳದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನದ ವಿರುದ್ಧವಾಗಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗೆ ಸಾಕಷ್ಟು ಅವಕಾಶವಿದೆ. ಆದರೆ ಸದನದಲ್ಲಿ ಚರ್ಚೆ ಮಾಡದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದಕ್ಕೆ ತೃಪ್ತರಾಗದೆ ಖಾಲಿ ಚೊಂಬು ಹಿಡಿದು ಪ್ರತಿಭಟಿಸಿದೆ. ಅದಕ್ಕೆ ಚೊಂಬು ಬಹಳ ಇಷ್ಟವಾಗಿರಬೇಕು ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಗ್ಯಾರಂಟಿಗಳ ಈಡೇರಿಕೆಗೆ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಗ್ಯಾರಂಟಿ ವಿಚಾರದಲ್ಲಿ ಅನೇಕ ತೆರಿಗೆ ಏರಿಕೆ ಮಾಡಿ ಜನತೆ ಮೇಲೆ ಹೊರೆ ಹಾಕುತ್ತಿದ್ದಾರೆ. ಕೇಂದ್ರದಿಂದ ಹಣ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಸದ್ಬಳಕೆ ಮಾಡುವುದನ್ನು ಬಿಟ್ಟು ಮತ್ತೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಂಘರ್ಷದ ಮೂಲಕ ಇವರು ಏನು ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net