

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವಾರ್ಡ್ಗಳ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಸಮಿತಿ ಒಂದನ್ನು ರಚಿಸಿ ಆದೇಶ ಹೊರಡಿಸಲಾಗಿದೆ.
ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗಿದ್ದು, 12 ವಾರಗಳ ಒಳಗಾಗಿ ವಾರ್ಡ್ ಮರುವಿಂಗಡಣಾ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
2020 ಸೆಪ್ಟೆಂಬರ್ ತಿಂಗಳಲ್ಲಿ ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್ಗಳನ್ನು ಪುನರ್ ವಿಂಗಡಣೆ ಮಾಡಲಾಗಿತ್ತು. ಹಿಂದೆ ಇದ್ದ ಬಿಜೆಪಿ ಸರ್ಕಾರ ಬಿಬಿಎಂಪಿ ವ್ಯಾಪ್ತಿಯನ್ನು 243 ವಾರ್ಡ್ಗಳಿಗೆ ಹೆಚ್ಚಿಸಿತ್ತು. ಬಿಜೆಪಿ ಸರ್ಕಾರ ಮಾಡಿಸಿರುವ ವಾರ್ಡ್ ಮರುವಿಂಗಡಣೆ ಸೂಕ್ತವಾಗಿಲ್ಲ ಎಂದು ಆರೋಪಿಸಿ ಮಾಜಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು.
ಬಿಬಿಎಂಪಿ ಚುನಾವಣೆ ಹಾಗೂ ವಾರ್ಡ್ ಮರುವಿಂಗಡಣೆ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್ಗೆ ಸರ್ಕಾರವು ತಪ್ಪುಗಳನ್ನು ಸರಿಪಡಿಸಿ 12 ವಾರಗಳಲ್ಲಿ ಹೊಸದಾಗಿ ವಾರ್ಡ್ಗಳ ಮರುವಿಂಗಡಣೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆಗೆ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.
ಸಮಿತಿ ಮುಖ್ಯಸ್ಥರಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಸದಸ್ಯರಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತರರು ಹಾಗೂ ಬಿಬಿಎಂಪಿ ಕಂದಾಯ ಇಲಾಖೆಯ ವಿಶೇಷ ಆಯುಕ್ತರು ಸಮಿತಿಯಲ್ಲಿದ್ಧಾರೆ.