ಅದ್ದೂರಿ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

16GKK1a
filter: 0; fileterIntensity: 0.000000; filterMask: 0; captureOrientation: 0; shaking: 0.000000; highlight: 1; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:1; bokeh:1; module: photo;hw-remosaic: false;touch: (-1.0, -1.0);sceneMode: 4;cct_value: 0;AI_Scene: (-1, -1);aec_lux: 244.37245;aec_lux_index: 0;albedo: ;confidence: ;motionLevel: -1;weatherinfo: weather:null, icon:null, weatherInfo:100;temperature: 34;zeissColor: bright;
Published on

ಗೋಕಾಕ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನ. 1ರಂದು ತಾಲೂಕಾಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ವಿವಿಧ ಕನ್ನಡಪರ ಸಂ&ಸಂಸ್ಥೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು ಎಂದು ತಹಸೀಲ್ದಾರ್​ ಡಾ.ಮೋಹನ ಭಸ್ಮೆ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯತೆ ವಹಿಸಿ ಮಾತನಾಡಿದರು.

ವಿವಿಧ ಕಲಾ ತಂಡಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗುವುದು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಎಲ್ಲ ಇಲಾಖೆಗಳ ಕಚೇರಿಗಳು ಮತ್ತು ನಗರವನ್ನು ವಿದ್ಯುತ್​ ದೀಪಗಳಿಂದ ಅಲಂಕರಿಸಲು ಸೂಚಿಸಲಾಗುವುದು ಎಂದರು.

ನಗರಸಭೆ ಪೌರಾಯುಕ್ತ ರವಿ ರಂಗಸುಭೆ, ಅಧಿಕಾರಿಗಳಾದ ಎಸ್​.ಪಿ.ವರಾಳೆ, ಪಿಎಸ್​ಐ ಕಿರಣ ಮೋಹಿತೆ, ಎಂ.ಎಂ.ನದ್​ಾ, ಎಂ.ಎಚ್​.ಗಜಾಕೋಶ, ಕರವೇ ಮುಖಂಡರಾದ ಬಸವರಾಜ ಖಾನಪ್ಪನವರ, ಕಿರಣ ಢಮಾಮಗರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net