

ಗೋಕಾಕ: ಹೊಸ ಜಿಲ್ಲೆ ಘೋಷಿಸುವಂತೆ ನಗರದ ತಹಸೀಲ್ದಾರ್ ಕಚೇರಿ ಎದುರು ಡಿ.13ರಂದು ಒಂದು ದಿನ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು. ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4 ದಶಕಗಳಿಂದ ಗೋಕಾಕ ನೂತನ ಜಿಲ್ಲಾ ಕೇಂದ್ರವನ್ನಾಗಿಸಲು ಸತತ ಹೋರಾಟಗಳು ನಡೆಯುತ್ತಿದ್ದು, ಸರ್ಕಾರ ಹಾಗೂ ಜಿಲ್ಲೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಕೇಂದ್ರವಾಗಿಲ್ಲ. ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಜಿಲ್ಲಾ ಕೇಂದ್ರವಾಗಲು ಸಹಕಾರ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುತುವರ್ಜಿ ವಹಿಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಬೇಕು ಎಂದರು. ಪ್ರೊ.ಅರ್ಜುನ್ ಪಂಗನ್ನವರ, ದಸ್ತಗಿರಿ ಪೈಲವಾನ್, ಸಂಜೀವ ಪೂಜಾರಿ, ಸದಾಕತ ಮಂಕಾದಾರ ಉಪಸ್ಥಿತರಿದ್ದರು.