

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಜೋಕಟ್ಟೆಯ 62 ನೇ ತೋಕೂರು, ಬೋರೆಗುಡ್ಡೆ, ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಮೂಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಿಬಿರ ಉದ್ಘಾಟಿಸಿದರು. ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ಉತ್ತಮ ವೇದಿಕೆ. ನಾರಾಯಣ ಗುರುಗಳ ತತ್ವ ಆದರ್ಶದಂತೆ ಬಡವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಆಡಳಿತ ಮಂಡಳಿ ಶ್ರೀ ವೆಂಕಟೇಶ ಶಿವ ಭಕ್ತಿ ಯೋಗ ಸಂಘದ ಹೆಗ್ಗಳಿಕೆ ಎಂದರು.
ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ ಜಯಂತ್ ಸಾಲ್ಯಾನ್, ಗ್ರಾಮ ಪಂಚಾಯಿತಿ 2ನೇ ವಾರ್ಡ್ ಸದಸ್ಯ ರವೀಂದ್ರ ಟಿ ಶೇಡಿಗುರಿ, ಕಾಲೇಜಿನ ಸಂಚಾಲಕ ವಸಂತ ಕಾರಂದೂರು, ಪ.ಪೂ.ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಆಶಲತಾ ಸುವರ್ಣ, ಬಿ.ಎಡ್.ಕಾಲೇಜಿನ ಪ್ರಾಂಶುಪಾಲೆ ಡಾ.ಧನಲಕ್ಮೀ, 1ನೇ ಗ್ರಾಮಪಂಚಾಯಿತಿ ಸದಸ್ಯ ರಮೇಶ್ ಟಿ ಸುವರ್ಣ, ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ವಸಂತ್, ಹಿಂದಿ ಉಪನ್ಯಾಸಕ ಉಮೇಶ್ ಹೆಗ್ಡೆ, ವಿದ್ಯಾರ್ಥಿ ನಾಯಕರಾದ ಸಾಗರ್, ಸುಮಿತ್, ಕಾಲೇಜು ಸಿಬ್ಬಂದಿ ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕಿ ವನಿತಾ ಶೆಟ್ಟಿ ನಿರೂಪಿಸಿದರು, ವಿದ್ಯಾರ್ಥಿ ನಾಯಕಿ ಸುಮಿತ್ರಾ ವಂದಿಸಿದರು.