ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನದ ಸರ ಕಳವು

Published on

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 2 ಲಕ್ಷ ರೂ. ವೌಲ್ಯದ 25 ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ.

ತಿ.ನರಸೀಪುರದ ತನುಜಾ ಚಿನ್ನದ ಸರ ಕಳೆದುಕೊಂಡವರು. ದಾವಣಗೆರೆಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಟುಂಬ ಸಮೇತ ಮೇ 29 ರಂದು ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಜೂ.1ರಂದು ರಾತ್ರಿ ದಾವಣಗೆರೆಯಿಂದ ಬಸ್‌ನಲ್ಲಿ ಮೈಸೂರಿಗೆ ಬಂದಿದ್ದಾರೆ. ಈ ವೇಳೆ ಚಿನ್ನದ ಸರವನ್ನು ಬಾಕ್ಸ್‌ನಲ್ಲಿ ಹಾಕಿ ವ್ಯಾನಿಟಿ ಬ್ಯಾಗ್‌ನಲ್ಲಿ ಇರಿಸಿದ್ದರು. ಇದನ್ನು ಗಮನಿಸಿದ್ದ ಖದೀಮರು ಅವರ ವ್ಯಾನಿಟಿ ಬ್ಯಾಗ್‌ನಲ್ಲಿ ಇದ್ದ ಸರವನ್ನು ಎಗರಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದು, ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net