ನಿಶ್ವಿತ್‌ಗೆ ಸತತ ಎರಡನೇ ಬಾರಿಗೆ ಚಿನ್ನ

karate
Published on

ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ನಿಶ್ವಿತ್ ಪಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನಿಯಾಗಿ ದೆಹಲಿಯಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಯ ಪುತ್ರ. ಸಂಸ್ಥೆ ಕರಾಟೆ ಶಿಕ್ಷಕ ಯಾದವ ಬೀರಂತಡ್ಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net