

ವಿಜಯವಾಣಿ ಸುದ್ದಿಜಾಲ ಧಾರವಾಡ
ಕವಲಗೇರಿ ರಸ್ತೆಯ ರಾಹುಲ ಗಾಂಽನಗರದ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಶಹರ ಠಾಣೆ ಪೊಲೀಸರು ಭೇದಿಸಿದ್ದಾರೆ. ಆರೋಪಿಯನ್ನು ಬಂಽಸಿ 6.45 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಉಮಾಕಾAತ ಲಿಂಗಪ್ಪ ಕರ್ಚಗಟ್ಟಿ ಎಂಬುವರ ಮನೆಯಲ್ಲಿ 2024ರ ಡಿ. 8ರಂದು ಕಳ್ಳತನವಾಗಿತ್ತು. ಈ ಕುರಿತು ಸಲ್ಲಿಕೆಯಾಗಿದ್ದ ಪ್ರಕರಣ ಭೇದಿಸಲು ಪೊಲೀಸ್ ತಂಡ ರಚಿಸಲಾಗಿತ್ತು. ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗದಗನ ಸುನೀಲ ಸಂಜೀವಪ್ಪ ಮುಳಗುಂದ ಎಂಬಾತನನ್ನು ಬಂಽಸಿದ್ದಾರೆ. ಈತನಿಂದ 6.45 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್‌ಸ್ಪೆಕ್ಟರ್ ಎನ್.ಸಿ. ಕಾಡದೇವರ, ಪಿಎಸ್‌ಐಗಳಾದ ಆರ್.ಎಚ್. ನದಾಫ ಹಾಗೂ ಸ್ವಾತಿ ಮುರಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.