

ಹಾನಗಲ್ಲ: ಮನೆಯ ಬೀಗ ಮುರಿದು ಒಳಗೆ ನುಗ್ಗಿದ ಖದೀಮರು 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಸಾಗರವಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಂಜುಳಾ ಅಶೋಕ ಚೌಟೇರ ಎಂಬುವರ ಮನೆ ಕಳ್ಳತನ ಆಗಿರುವುದು.
ಇವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.