ಬಿಇಯಲ್ಲಿ ರೇಷ್ಮಾರಾಜ್‌ಗೆ ಚಿನ್ನದ ಪದಕ

mysore
Published on

ಮೈಸೂರು: ಮೈಸೂರು ಕಾಲೇಜು ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ಸಿ.ರೇಷ್ಮಾರಾಜ್ ಬಿಇ ಪದವಿಯನ್ನು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಪ್ರಾಚಾರ್ಯ ಡಾ.ಎಂ.ಎಸ್.ಪ್ರಭುಸ್ವಾಮಿ ತಿಳಿಸಿದರು.


ಜು.18ರಂದು ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಚಿನ್ನದ ಪದಕ ಪ್ರದಾನ ಮಾಡಿದ್ದು, ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ್ದಕ್ಕಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಪ್ರಾಧ್ಯಾಪಕ ಪ್ರೊ.ಯೋಗೇಶ್, ಸಾಧಕ ವಿದ್ಯಾರ್ಥಿನಿ ಸಿ.ರೇಷ್ಮಾರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net