ನೆಟ್‌ಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ

netball
ರಾಜ್ಯಮಟ್ಟದ ನೆಟ್‌ಬಾಲ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಉಜಿರೆ ಎಸ್‌ಡಿ.ಎಂ.ಪಾಲಿಟೆಕ್ನಿಕ್ ಕಾಲೇಜಿನ ಪ್ರಶಾಂತ್ ಅವರನ್ನು ಗೌರವಿಸಲಾಯಿತು.
Published on

ಬೆಳ್ತಂಗಡಿ: ಉಜಿರೆಯ ಎಸ್.ಡಿ.ಎಂ.ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೇ ಸೀನಿಯರ್ ರಾಜ್ಯಮಟ್ಟದ ನೆಟ್‌ಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ತರಬೇತಿ ನೀಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net