ವಿಶ್ವ ಪವರ್ ಲಿಫ್ಟಿಂಗ್ ನಲ್ಲಿ ಆದರ್ಶ್‌ಗೆ ಚಿನ್ನದ ಪದಕ

Adarsh gold medal
Published on

ಮಂಗಳೂರು: ರೊಮೇನಿಯಾದ ಕ್ಲುಜ್‌ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್-2023()ನ 59 ಕೆ.ಜಿ. ವಿಭಾಗದಲ್ಲಿ ಗುರುವಾರ (ಆಗಸ್ಟ್ 24) ಮಂಗಳೂರಿನ ಆದರ್ಶ್ ಬಿ ಅತ್ತಾವರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಮಂಗಳೂರು ಅತ್ತಾವರ ನಿವಾಸಿ ಭರತ್ ಕುಮಾರ್ ಹಾಗೂ ಚಂದ್ರಾಕ್ಷಿ ದಂಪತಿ ಪುತ್ರರಾದ ಇವರು ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ(ಐಸಿಎಫ್)ನಲ್ಲಿ ಉದ್ಯೋಗಿಯಾಗಿದ್ದಾರೆ.

2021-22ರಲ್ಲಿ ಟರ್ಕಿಯಲ್ಲಿ ನಡೆದ ಏಷಿಯನ್ ಹಾಗೂ ವರ್ಲ್ಡ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿಯೂ ಚಿನ್ನದ ಪದಕ ಜಯಿಸಿದ್ದರು. ಇವರು ಏಕಲವ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಬಾಲಾಂಜನೇಯ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net